AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಸಿಬ್ಬಂದಿ ಸಸ್ಪೆಂಡ್: ಸರ್ಕಾರಿ ನೌಕರಲ್ಲೀಗ ಆತಂಕ

RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಸಿಬ್ಬಂದಿ ಸಸ್ಪೆಂಡ್: ಸರ್ಕಾರಿ ನೌಕರಲ್ಲೀಗ ಆತಂಕ

ಭಾವನಾ ಹೆಗಡೆ
|

Updated on: Oct 22, 2025 | 12:18 PM

Share

ಜಿಲ್ಲೆಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಡುಗೆ ಸಹಾಯಕರಾದ ಪ್ರಮೋದ್​ ರನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ. ಅವರು ಬಸವಕಲ್ಯಾಣದಲ್ಲಿ ಸೆಪ್ಟೆಂಬರ್ ‌ 13 ರಂದು ನಡೆದ RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದರು. ಸರ್ಕಾರದಿಂದ ವೇತನ ಪಡೆದು ಯಾವುದೇ ಸಂಘ ಸಂಸ್ಥೆಯಲ್ಲಿ ಭಾಗಿಯಾಗಬಾರದೆಂದು ಪ್ರತಿಯಲ್ಲಿ ಉಲ್ಲೇಖಿಸಿ ತಾಲೂಕಾಧಿಕಾರಿ ಆದೇಶ ಹೊರಡಿಸಿದ್ದಾರೆ.ಈ ಘಟನೆ ಪಥಸಂಚಲನದಲ್ಲಿ ಭಾಗಿಯಾದ ಸರ್ಕಾರಿ ನೌಕರರಲ್ಲಿ ಆತಂಕ ಮೂಡಿಸಿದೆ.

ಬೀದರ್, ಅಕ್ಟೋಬರ್ 22:  ಆರ್​​ಎಸ್​​ಎಸ್​ ಪಥಸಂಚಲನದಲ್ಲಿ ಭಾಗಿಯಾದ ಆರೋಪ ಮೇಲೆ ಮೊನ್ನೆ ಅಷ್ಟೇ ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯ್ತಿ ಪಿಡಿಒ ಒಬ್ಬರನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಅಮಾನತು ಮಾಡಿತ್ತು. ಈ ಬಗ್ಗೆ ಪರ ವಿರೋಧ ಚರ್ಚೆಗಳ ನಡುವೆ ಇದೀಗ ಮತ್ತೊಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ. ಹೌದು…ಬೀದರ್ ಜಿಲ್ಲೆಯ ಬಸವಕಲ್ಯಾಣದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಡುಗೆ ಸಹಾಯಕರಾದ ಪ್ರಮೋದ್​ ರನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ.

ಸೆಪ್ಟೆಂಬರ್ ‌ 13 ರಂದು ಬಸವಕಲ್ಯಾಣದಲ್ಲಿ ನಡೆದ RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದರು. ಸರ್ಕಾರದಿಂದ ವೇತನ ಪಡೆದು ಯಾವುದೇ ಸಂಘ ಸಂಸ್ಥೆಯಲ್ಲಿ ಭಾಗಿಯಾಗಬಾರದೆಂದು ಪ್ರತಿಯಲ್ಲಿ ಉಲ್ಲೇಖಿಸಿ ತಾಲೂಕಾಧಿಕಾರಿ ಆದೇಶ ಹೊರಡಿಸಿದ್ದಾರೆ. ಈ ಘಟನೆ ಪಥಸಂಚಲನದಲ್ಲಿ ಭಾಗಿಯಾದ ಸರ್ಕಾರಿ ನೌಕರರಲ್ಲಿ ಆತಂಕ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.