ಬೀದರ್ನಲ್ಲಿ ಬಿರುಗಾಳಿ ಸಹಿತ ಮಳೆ ಆರ್ಭಟ: ಬರೋಬ್ಬರಿ ಒಂದು ಎಕರೆಯಲ್ಲಿದ್ದ ಪಪ್ಪಾಯಿ ಬೆಳೆ ಸಂಪೂರ್ಣ ನಾಶ
ಬೀದರ್ ಜಿಲ್ಲೆಯಲ್ಲಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಯಿಂದ ಒಂದು ಎಕರೆಯಲ್ಲಿದ್ದ ಪಪ್ಪಾಯಿ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ರೈತ ಬಾಬ್ ಶೆಟ್ಟಿ ಒಂದೂವರೆ ಲಕ್ಷ ರೂಪಾಯಿ ಹೂಡಿಕೆ ಮಾಡಿದ್ದು, ನಾಲ್ಕೈದು ಲಕ್ಷ ರೂಪಾಯಿ ಆದಾಯ ನಿರೀಕ್ಷಿಸಿದ್ದರು. ಅಕಾಲಿಕ ಮಳೆಯಿಂದ ಬೆಳೆ ನಾಶವಾಗಿ ರೈತರು ನಷ್ಟ ಅನುಭವಿಸಿದ್ದಾರೆ.
ಬೀದರ್, ಮೇ 20: ಬೀದರ್ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯು ರೈತರ ಬದುಕಿಗೆ ಭಾರಿ ಹೊಡೆತ ನೀಡಿದೆ. ಬೀದರ್ ತಾಲೂಕಿನ ಕೊಳ್ಳಾರ ಬಿ ಗ್ರಾಮದ ಬಾಬ್ ಶೆಟ್ಟಿ ಅವರ ಒಂದು ಎಕರೆಯ ಪಪ್ಪಾಯಿ ತೋಟ ಸಂಪೂರ್ಣವಾಗಿ ನಾಶವಾಗಿದೆ. ಐದು ತಿಂಗಳ ಹಿಂದೆ ನಾಟಿ ಮಾಡಿದ್ದ ಪಪ್ಪಾಯಿ ಬೆಳೆ ಇನ್ನೆರಡು ತಿಂಗಳಲ್ಲಿ ಕಟಾವಿಗೆ ಬರಬೇಕಿತ್ತು. ರೈತರು ಈ ಬೆಳೆಯ ಮೇಲೆ ಸುಮಾರು ಒಂದರಿಂದ ಒಂದೂವರೆ ಲಕ್ಷ ರೂಪಾಯಿ ಖರ್ಚು ಮಾಡಿದ್ದರು. ಆದರೆ, ಭಾರಿ ಮಳೆಯಿಂದಾಗಿ ಪ್ರತಿಯೊಂದು ಗಿಡದ ಎಲೆಗಳು ಉದುರಿ, ಕಾಯಿಗಳೂ ಹಾನಿಗೊಂಡಿವೆ.
ಸಾಲ ಸೋಲ ಮಾಡಿ ಪಪ್ಪಾಯಿ ಬೆಳೆದಿದ್ದ ಬಾಬ್ ಶೆಟ್ಟಿ, ನಾಲ್ಕೈದು ಲಕ್ಷ ರೂಪಾಯಿ ಆದಾಯ ಗಳಿಕೆಯ ನಿರೀಕ್ಷೆಯಲ್ಲಿದ್ದರು. ಆದರೆ, ಅನಿರೀಕ್ಷಿತ ಮಳೆಯಿಂದ ಬೆಳೆ ಸಂಪೂರ್ಣವಾಗಿ ಹಾಳಾಗಿರುವುದರಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆಗಾಳಿ ಮತ್ತು ಆಲಿಕಲ್ಲು ಮಳೆ ರೈತರ ಬದುಕನ್ನು ಬರಬಾದ್ ಮಾಡಿದೆ ಎಂದು ಅವರು ಅಳಲನ್ನು ತೋಡಿಕೊಂಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: May 20, 2026 02:05 PM
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್

