ಬೀದರ್: ಗಾಳಿ ಸಹಿತ ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು

Edited By:

Updated on: May 26, 2026 | 10:56 PM

ಬೀದರ್ ಜಿಲ್ಲೆಯ ಹುಲಸೂರು ಗ್ರಾಮದಲ್ಲಿ ಭಾರೀ ಮಳೆಯಿಂದ ದುರಂತ ಸಂಭವಿಸಿದೆ. ಮನೆ ಮೇಲ್ಚಾವಣಿಯಿಂದ ಕಲ್ಲು ಬಿದ್ದು ಆರು ವರ್ಷದ ಮಗು ಮೃತಪಟ್ಟಿದೆ. ಈ ಘಟನೆ ತೀವ್ರ ನೋವುಂಟು ಮಾಡಿದ್ದು, ಮಳೆಯ ಆರ್ಭಟಕ್ಕೆ ಮನೆಗಳ ಸುರಕ್ಷತೆಯ ಬಗ್ಗೆ ಆತಂಕ ಮೂಡಿಸಿದೆ. ಹುಲಸೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೀದರ್, ಮೇ 26: ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಆಲಿಕಲ್ಲು ಮಳೆ ಸುರಿದಿದೆ. ಧಾರಾಕಾರ ಮಳೆಗೆ ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವನ್ನಪ್ಪಿರುವಂತಹ ದಾರುಣ ಘಟನೆ ಜಿಲ್ಲೆಯ ಹುಲಸೂರು ತಹಶೀಲ್ದಾರ್ ಕಚೇರಿ ಬಳಿಯ ಬಡಾವಣೆಯಲ್ಲಿ ನಡೆದಿದೆ. ಮಾಹೇರಾ (6) ಮೃತ ಮಗು. ಇನ್ನು ಈ ವೇಳೆ ಫೈಸ್(8), ಲಾಯಿಬಾ(10), ಯಾಸ್ಮೀನ್(30) ಇಸ್ಮಾಯಿಲ್​ಗೆ ಗಾಯಗಳಾಗಿದ್ದು, ಹುಲಸೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಗೆ ತಹಶೀಲ್ದಾರ್ ಶಿವಾನಂದ ಭೇಟಿ ನೀಡಿ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಹುಲಸೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಘಟನೆಯು ಸ್ಥಳೀಯರಲ್ಲಿ ಆಘಾತ ಮತ್ತು ಆತಂಕವನ್ನು ಮೂಡಿಸಿದೆ. ಸದ್ಯ ಭಾರೀ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More