ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು: ಸಂಬಂಧಿ ಹೇಳಿದ್ದಿಷ್ಟು

Edited By:

Updated on: Feb 16, 2026 | 8:41 PM

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮದ ಬಳಿ ಕಾರಂಜಾ ಡ್ಯಾಂ ಕಾಲುವೆಯಲ್ಲಿ ತಂದೆ ವಿಶ್ವನಾಥ (50) ಮತ್ತು ಮಗ ಅಮರೇಶ (23) ಮುಳುಗಿ ಮೃತಪಟ್ಟಿದ್ದಾರೆ. ಮಗಳ ಮದುವೆಯ ಸಾಲ ತೀರಿಸಲು ಕಷ್ಟಪಡುತ್ತಿದ್ದ ಈ ಕುಟುಂಬದ ಸದಸ್ಯರು, ಹಮಾಲಿ ಕೆಲಸ ಮಾಡುತ್ತಿದ್ದರು. ಸಂಬಂಧಿಕರು ಸರ್ಕಾರದಿಂದ ಸೂಕ್ತ ಪರಿಹಾರಕ್ಕೆ ಮನವಿ ಮಾಡಿದ್ದಾರೆ.

ಬೀದರ್, ಫೆಬ್ರವರಿ 16: ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮದ ಬಳಿ ಆಕಸ್ಮಿಕವಾಗಿ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದು ತಂದೆ, ಮಗ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಘಟನೆಗೆ ಮೃತರ ಸಂಬಂಧಿ ಟಿವಿ9 ಜೊತೆಗೆ ಮಾತನಾಡಿದ್ದು, ಮಗಳ ಮದುವೆ ಸಾಲ ತೀರಿಸುವುದಕ್ಕೆ ಹಗಲು ರಾತ್ರಿ ಕಷ್ಟಪಟ್ಟು ದುಡಿಯುತ್ತಿದ್ದರು. ಸಾಲದ ಹೊರೆ ಹೆಚ್ಚಾಗಿದ್ದರಿಂದ ತಂದೆ, ಮಗ ಲಾರಿ ಹಮಾಲಿ ಕೆಲಸ ಮಾಡುತ್ತಿದ್ದರು. ಕೆಲಸದ ನಡುವೆ ಕಾರಂಜಾ ಕಾಲುವೆ (ಬೆಳ್ಳೆ ಕೆನಲ್) ಬಳಿ ಕೈ, ಕಾಲು ತೊಳೆಯುವ ವೇಳೆ ಘಟನೆ ಸಂಭವಿಸಿ ಇಬ್ಬರು ಒಟ್ಟಿಗೆ ಪ್ರಾಣಬಿಟ್ಟಿದ್ದಾರೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More