ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು: ತಾಯಿ ಸೇರಿ ಐವರು ಆಸ್ಪತ್ರೆಗೆ ದಾಖಲು
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದಲ್ಲಿ ಮಾವು ತಿಂದ ನಂತರ ಅಸ್ವಸ್ಥಗೊಂಡಿದ್ದ ಭವಾನಿ (17) ಮತ್ತು ಸಂಧ್ಯಾರಾಣಿ (14) ಎಂಬ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ. ವಿಜಯಶ್ರೀ ಎಂಬ ಮತ್ತೊಬ್ಬ ಬಾಲಕಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕುಟುಂಬವು ಆರ್ಥಿಕ ಸಂಕಷ್ಟದಲ್ಲಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ಮತ್ತು ಸಂತ್ರಸ್ತ ಕುಟುಂಬಕ್ಕೆ ನೆರವು ನೀಡುವಂತೆ ಮನವಿ ಮಾಡಲಾಗಿದೆ.
ಬೀದರ್, ಜೂ.12: ಮಾವಿನ ಹಣ್ಣು ತಿಂದು ಅಸ್ವಸ್ಥಗೊಂಡಿದ್ದ ಬೀದರ್ ಮೂಲದ ಇಬ್ಬರು ಸಹೋದರಿಯರು ಚಿಕಿತ್ಸೆ ಫಲಿಸದೆ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬೀದರ್ ಜಿಲ್ಲೆ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದ ನಿವಾಸಿಗಳು ಆಗಿರುವ ಭವಾನಿ ವೈಜಿನಾಥ ಮೇತ್ರೆ (17) ಮತ್ತು ಸಂಧ್ಯಾರಾಣಿ ಮೇತ್ರೆ (14) ಮೃತಪಟ್ಟ ದುರ್ದೈವಿ ಬಾಲಕಿಯರು ಎಂದು ಹೇಳಲಾಗಿದೆ. ಮನೆಯಲ್ಲಿ ಊಟದ ಬಳಿಕ ಎಲ್ಲರೂ ಸೇರಿ ಮಾವಿನಹಣ್ಣು ತಿಂದಿದ್ದಾರೆ. ಸ್ವಲ್ಪ ಹೊತ್ತಿನ ನಂತರ ತಾಯಿ ಇಂದುಮತಿ ಹಾಗೂ ಐವರು ಹೆಣ್ಣುಮಕ್ಕಳು ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ. ಮಾವು ತಿಂದ ಬಳಿಕ ವಾಂತಿ ಭೇದಿ ಕಾಣಿಸಿಕೊಂಡು ಎಲ್ಲರಲ್ಲೂ ವಾಂತಿ ಭೇದಿ ಕಾಣಿಸಿಕೊಂಡು ಅಸ್ವಸ್ಥಗೊಂಡಿದ್ದಾರೆ. ಎಲ್ಲರನ್ನೂ ತಕ್ಷಣ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭವಾನಿ ಮೇತ್ರೆ, ಸಂಧ್ಯಾರಾಣಿ ಮೇತ್ರೆ ಸಾವನ್ನಪ್ಪಿದ್ದಾರೆ. ಇನ್ನು ಮತ್ತೊಬ್ಬ ಸಹೋದರಿ ವಿಜಯಶ್ರೀ(19)ಗೆ ಚಿಕಿತ್ಸೆ ಮುಂದುವರಿದೆ. ಇನ್ನು ತಾಯಿ ಮತ್ತು ವಿಜಯಶ್ರೀ ಚೇತರಿಕೆಗೊಂಡಿದ್ದಾರೆ ಎಂದು ಹೇಳಲಾಗಿದೆ. ಇದೀಗ ಭವಾನಿ ಮೇತ್ರೆ, ಸಂಧ್ಯಾರಾಣಿ ಮೇತ್ರೆ ಅವರ ದೇಹವನ್ನು ಮರಣೋತ್ತರ ಪರೀಕ್ಷೆ ಕಳಿಸಲಾಗಿದೆ. ಈ ವರದಿ ಬಂದ ನಂತರವೇ ಸತ್ಯಾಂಶ ಬಹಿರಂಗವಾಗಲಿದೆ. ಈ ಪ್ರಕರಣದ ಬಗ್ಗೆ ಹೈದರಾಬಾದ್‌ನ ನಾರಾಯಣಗುಡ ಠಾಣೆಯಲ್ಲಿ ದೂರು ದಾಖಲಾಗಿದೆ. ಇನ್ನು ಈ ಘಟನೆ ಮೂರು ದಿನದ ಹಿಂದೆಯೇ ನಡೆದಿದೆ ಎಂದು ಹೇಳಲಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
