Video: ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ

Updated on: Sep 02, 2026 | 4:40 PM

ಬೀದರ್ ವಿಶ್ವವಿದ್ಯಾಲಯವು ಮಾರ್ಚ್ 2023 ರಲ್ಲಿ ಆರಂಭಗೊಂಡಿದ್ದು, ಮೂಲಭೂತ ಸೌಕರ್ಯಗಳಿಲ್ಲದೆ ವಿದ್ಯಾರ್ಥಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕಳಪೆ ಕಟ್ಟಡಗಳು, ಆಡಳಿತ ಭವನದ ಕೊರತೆ, ಪ್ರಯೋಗಾಲಯಗಳ ವ್ಯವಸ್ಥೆ ಇಲ್ಲದಿರುವುದು, ಹಾಗೂ ಸಾರಿಗೆ ಸಮಸ್ಯೆಯಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅಡ್ಡಿಯಾಗಿದೆ. ಕುಲಪತಿಗಳು ಮತ್ತು ಸಿಬ್ಬಂದಿ ಕೂಡ ಚಿಕ್ಕ ಕೊಠಡಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಬೀದರ್ ವಿಶ್ವವಿದ್ಯಾಲಯ ಹೆಸರಿಗೆ ಮಾತ್ರ ವಿಶ್ವವಿದ್ಯಾಲಯವಾಗಿರುವ ಇಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸುಮಾರು 800ಕ್ಕೂ ಹೆಚ್ಚು ವಿದ್ಯಾರ್ಥಿಗಳು 14ಕ್ಕೂ ಹೆಚ್ಚು ಕೋರ್ಸ್‌ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರೂ, ಉತ್ತಮ ಗುಣಮಟ್ಟದ ಕಟ್ಟಡಗಳು, ಆಡಳಿತ ಭವನ, ಹಾಗೂ ಪ್ರಯೋಗಾಲಯದ ವ್ಯವಸ್ಥೆ ಇಲ್ಲ. ಕುಲಪತಿಗಳು ಮತ್ತು 50ಕ್ಕೂ ಹೆಚ್ಚು ಸಿಬ್ಬಂದಿ ಚಿಕ್ಕ ಕೊಠಡಿಗಳಲ್ಲಿ ಕಾರ್ಯನಿರ್ವಹಿಸಬೇಕಾದ ಪರಿಸ್ಥಿತಿ ಇದೆ. ಬೀದರ್‌ನಿಂದ 20 ಕಿಲೋಮೀಟರ್ ದೂರದಲ್ಲಿರುವ ಈ ವಿಶ್ವವಿದ್ಯಾಲಯಕ್ಕೆ ಸಾರಿಗೆ ವ್ಯವಸ್ಥೆ ದೊಡ್ಡ ಸಮಸ್ಯೆಯಾಗಿದೆ. ಕೆ.ಎಸ್.ಆರ್.ಟಿ.ಸಿ. ಬಸ್‌ಗಳು ಕ್ಯಾಂಪಸ್‌ನಲ್ಲಿ ನಿಲ್ಲುವುದಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ಗಂಟೆಗಟ್ಟಲೆ ಬಸ್ಸಿಗಾಗಿ ಕಾಯಬೇಕಾಗಿದೆ. ಈ ಕುರಿತು ಕೆ.ಎಸ್.ಆರ್.ಟಿ.ಸಿ.ಗೆ ಪತ್ರ ಬರೆದಿದ್ದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಪ್ರಯೋಗಾಲಯಗಳಿಲ್ಲದ ಕಾರಣ ವಿದ್ಯಾರ್ಥಿಗಳು ಬೇರೆ ಕಡೆ ಹೋಗಿ ಅಧ್ಯಯನ ಮಾಡಬೇಕಾಗಿದೆ. ಸರ್ಕಾರ ವಿಶ್ವವಿದ್ಯಾಲಯವನ್ನು ಘೋಷಿಸಿ, ಸಿಬ್ಬಂದಿಯನ್ನು ನೇಮಕ ಮಾಡಿದೆಯಾದರೂ, ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಸಾರಿಗೆ ವ್ಯವಸ್ಥೆ, ಗುಣಮಟ್ಟದ ಪ್ರಯೋಗಾಲಯ ಮತ್ತು ಸುಸಜ್ಜಿತ ಕ್ಯಾಂಪಸ್ ನಿರ್ಮಿಸುವ ಅಗತ್ಯವಿದೆ.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Sep 02, 2026 03:08 PM
Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More