ಇರಾನ್ ಯುದ್ಧದ ಪರಿಣಾಮ ಬೀದರ್ ಕಲ್ಲಂಗಡಿಗೂ ಇಲ್ಲ ಬೆಲೆ!

Edited By:

Updated on: Mar 30, 2026 | 11:35 AM

ಜಿಲ್ಲೆಯಲ್ಲಿ ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಕಲ್ಲಂಗಡಿ ಬೆಳೆಗಾರರಿಗೆ ಭಾರೀ ಹೊಡೆತ ಬಿದ್ದಿದೆ. ರಫ್ತು ವ್ಯವಹಾರದಲ್ಲಿ ವ್ಯತ್ಯಯ ಉಂಟಾಗಿ ಕಲ್ಲಂಗಡಿ ದರ ಪಾತಾಳಕ್ಕೆ ಕುಸಿದಿದ್ದು, ಕೆಜಿಗೆ ಕೇವಲ 4 ರಿಂದ 5 ರೂಪಾಯಿಗೆ ಮಾರಾಟವಾಗುತ್ತಿದೆ. ಕಟಾವು ಮತ್ತು ಸಾಗಾಟ ವೆಚ್ಚವೂ ಮರಳದ ಸ್ಥಿತಿ ನಿರ್ಮಾಣವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉತ್ತಮ ಗುಣಮಟ್ಟದ ಕಲ್ಲಂಗಡಿ ಇದ್ದರೂ ಖರೀದಿದಾರರ ಕೊರತೆಯಿಂದ ಬೆಳೆ ಹೊಲದಲ್ಲಿಯೇ ಕೊಳೆಯುತ್ತಿದ್ದು, ಜಿಲ್ಲೆಯ ಬಹುತೇಕ ರೈತರು ಭಾರೀ ನಷ್ಟ ಅನುಭವಿಸುತ್ತಿದ್ದಾರೆ.

ಬೀದರ್, ಮಾರ್ಚ್​ 30: ಜಿಲ್ಲೆಯಲ್ಲಿ ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಕಲ್ಲಂಗಡಿ ಬೆಳೆಗಾರರಿಗೆ ಭಾರೀ ಹೊಡೆತ ಬಿದ್ದಿದೆ. ರಫ್ತು ವ್ಯವಹಾರದಲ್ಲಿ ವ್ಯತ್ಯಯ ಉಂಟಾಗಿ ಕಲ್ಲಂಗಡಿ ದರ ಪಾತಾಳಕ್ಕೆ ಕುಸಿದಿದ್ದು, ಕೆಜಿಗೆ ಕೇವಲ 4 ರಿಂದ 5 ರೂಪಾಯಿಗೆ ಮಾರಾಟವಾಗುತ್ತಿದೆ. ಕಟಾವು ಮತ್ತು ಸಾಗಾಟ ವೆಚ್ಚವೂ ಮರಳದ ಸ್ಥಿತಿ ನಿರ್ಮಾಣವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉತ್ತಮ ಗುಣಮಟ್ಟದ ಕಲ್ಲಂಗಡಿ ಇದ್ದರೂ ಖರೀದಿದಾರರ ಕೊರತೆಯಿಂದ ಬೆಳೆ ಹೊಲದಲ್ಲಿಯೇ ಕೊಳೆಯುತ್ತಿದ್ದು, ಜಿಲ್ಲೆಯ ಬಹುತೇಕ ರೈತರು ಭಾರೀ ನಷ್ಟ ಅನುಭವಿಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸುರೇಶ್ ನಾಯಕ್

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More