ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ ನೋಡಿ

Edited By:

Updated on: Sep 16, 2026 | 5:26 PM

ಬೀದರ್ ಜಿಲ್ಲೆಯು ಐತಿಹಾಸಿಕ ಕೋಟೆ, ಗುಮ್ಮಜ್‌ಗಳು ಮತ್ತು ಪ್ರಾಚೀನ ದೇವಾಲಯಗಳಂತಹ ಭವ್ಯ ಸ್ಮಾರಕಗಳಿಂದ ಸಮೃದ್ಧವಾಗಿದೆ. ಪ್ರತಿನಿತ್ಯ ನೂರಾರು ಪ್ರವಾಸಿಗರು ಮತ್ತು ವಿದ್ಯಾರ್ಥಿಗಳು ಭೇಟಿ ನೀಡುತ್ತಾರೆ. ಆದರೂ, ಮಾರ್ಗದರ್ಶಕರ ಕೊರತೆ, ಮಾಹಿತಿ ಫಲಕಗಳ ಅಭಾವ, ಕುಡಿಯುವ ನೀರು ಮತ್ತು ಊಟದ ಸೌಲಭ್ಯಗಳಂತಹ ಮೂಲಸೌಕರ್ಯಗಳ ಕೊರತೆಯಿಂದಾಗಿ ಪ್ರವಾಸಿಗರಿಗೆ ನಿರಾಸೆಯಾಗುತ್ತಿದೆ.

ಬೀದರ್​, ಸೆಪ್ಟೆಂಬರ್​​ 16: ಕರ್ನಾಟಕದ ಉತ್ತರ ಪೂರ್ವ ಭಾಗದಲ್ಲಿರುವ ಐತಿಹಾಸಿಕ ಬೀದರ್ ಜಿಲ್ಲೆಯು ಬಹಮನಿ ಸುಲ್ತಾನರ ಕಾಲದ ಭವ್ಯ ಕೋಟೆ, ಅಷ್ಟೂರಿನ ಗುಮ್ಮಜ್‌ಗಳು, ಉಮಾ ಮಹೇಶ್ವರಿ ದೇವಾಲಯ ಮತ್ತು ಅಂದಿನ ಕಾಲದ ಅನನ್ಯ ಜಲಮಾರ್ಗ ಸೇರಿ ಹಲವು ಶ್ರೀಮಂತ ಸ್ಮಾರಕಗಳಿಗೆ ನೆಲೆಯಾಗಿದೆ. ಕಲ್ಯಾಣಿ ಚಾಲುಕ್ಯರು ಮತ್ತು ಬಹಮನಿ ಸುಲ್ತಾನರು ಆಳಿದ ಈ ನೆಲವು ಅಪಾರ ಇತಿಹಾಸವನ್ನು ಹೊಂದಿದೆ. ಪ್ರತಿ ವರ್ಷವೂ ದೇಶ-ವಿದೇಶಗಳಿಂದ ನೂರಾರು ಪ್ರವಾಸಿಗರು, ಶಾಲಾ ವಿದ್ಯಾರ್ಥಿಗಳು ಈ ತಾಣಗಳಿಗೆ ಭೇಟಿ ನೀಡುತ್ತಾರೆ. ಆದರೆ, ಈ ಐತಿಹಾಸಿಕ ತಾಣಗಳಲ್ಲಿ ಪ್ರವಾಸಿಗರಿಗೆ ಮಾರ್ಗದರ್ಶನ ನೀಡುವ ಗೈಡ್‌ಗಳ ಕೊರತೆ ಎದ್ದು ಕಾಣುತ್ತಿದೆ. ಸ್ಮಾರಕಗಳ ಇತಿಹಾಸ, ವೈಶಿಷ್ಟ್ಯಗಳನ್ನು ತಿಳಿಸಲು ಸರಿಯಾದ ಮಾಹಿತಿ ಫಲಕಗಳಿಲ್ಲ. ಶಾಲಾ ಮಕ್ಕಳಿಗೆ ಊಟ ಮಾಡಲು ಸೂಕ್ತ ಸೌಲಭ್ಯಗಳಿಲ್ಲ ಮತ್ತು ಕುಡಿಯುವ ನೀರಿನ ವ್ಯವಸ್ಥೆಯೂ ಸಮರ್ಪಕವಾಗಿಲ್ಲ. ಪುರಾತತ್ವ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಗಳು ಈ ತಾಣಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸುರೇಶ್ ನಾಯಕ್

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More