AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್‌ನ ಜಾನುವಾರು ಸಂಶೋಧನೆ ಹಾಗೂ ಮಾಹಿತಿ ಕೇಂದ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ

ಬೀದರ್‌ನ ಜಾನುವಾರು ಸಂಶೋಧನೆ ಹಾಗೂ ಮಾಹಿತಿ ಕೇಂದ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ

ಸುರೇಶ ನಾಯಕ
| Edited By: ವಿವೇಕ ಬಿರಾದಾರ|

Updated on: Dec 24, 2024 | 1:22 PM

Share

ಬೀದರ್‌ನ ಜಾನುವಾರು ಸಂಶೋಧನೆ ಮತ್ತು ಮಾಹಿತಿ ಕೇಂದ್ರವು 2024ನೇ ಸಾಲಿನ ರಾಷ್ಟ್ರಮಟ್ಟದ ಜಾನುವಾರು ತಳಿ ಸಂರಕ್ಷಣೆ ಪ್ರಶಸ್ತಿಯನ್ನು ದೇವಣಿ ತಳಿ ಸಂರಕ್ಷಣೆಗಾಗಿ ಪಡೆದುಕೊಂಡಿದೆ. ಹರಿಯಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಬಿ.ವಿ. ಶಿವಪ್ರಕಾಶ್ ಮತ್ತು ಡಾ. ಪ್ರಕಾಶ್ ಕುಮಾರ ರಾಠೋಡ ಪ್ರಶಸ್ತಿ ಸ್ವೀಕರಿಸಿದರು. ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕುಲಪತಿಗಳು ಈ ಸಾಧನೆಯನ್ನು ಅಭಿನಂದಿಸಿದ್ದಾರೆ.

2024ನೇ ಸಾಲಿನ ರಾಷ್ಟ್ರಮಟ್ಟದ ಜಾನುವಾರು ತಳಿ ಸಂರಕ್ಷಣೆ ಪ್ರಶಸ್ತಿಯನ್ನು ಬೀದರ್‌ನ ಜಾನುವಾರು ಸಂಶೋಧನೆ ಹಾಗೂ ಮಾಹಿತಿ ಕೇಂದ್ರ ಮುಡಿಗೇರಿಸಿಕೊಂಡಿದೆ. ದೇವಣಿ ತಳಿ ಸಂರಕ್ಷಣೆಗಾಗಿ ಪಡೆದುಕೊಂಡಿದೆ. ರಾಷ್ಟ್ರೀಯ ಕೃಷಿಕರ ದಿನದ ಅಂಗವಾಗಿ ಹರಿಯಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಶೋಧನಾ ನಿರ್ದೇಶಕ ಡಾ.ಬಿ.ವಿ.ಶಿವಪ್ರಕಾಶ್ ಹಾಗೂ ಕೇಂದ್ರದ ಮುಖ್ಯಸ್ಥ ಡಾ.ಪ್ರಕಾಶ್‌ಕುಮಾರ ರಾಠೋಡ ಅವ್ರು ಪ್ರಶಸ್ತಿ ಸ್ವೀಕರಿಸಿದ್ದಾರೆ. “ದೇವಣಿ ತಳಿ ಸಂರಕ್ಷಣೆಗಾಗಿ” ಬೀದರ್‌ನ ಜಾನುವಾರು ಸಂಶೋಧನೆ ಹಾಗೂ ಮಾಹಿತಿ ಕೇಂದ್ರಕ್ಕೆ ರಾಷ್ತ್ರೀಯ ಜಾನುವಾರು ತಳಿ ಸಂರಕ್ಷಣೆ ಪ್ರಶಸ್ತಿ ದೊರೆತಿದೆ ಅಂತ ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಕೆ.ಸಿ.ವೀರಣ್ಣ ತಿಳಿಸಿದ್ದಾರೆ. ಅಲ್ಲದೇ, ಪಶುವೈದ್ಯಕೀಯ ಮತ್ತು ಪ್ರಾಣಿ ವಿಜ್ಞಾನ ಕ್ಷೇತ್ರದಲ್ಲಿ ಗಮನಾರ್ಹ ಸೇವೆಗೈದು ಪ್ರಶಸ್ತಿಯನ್ನು ಪಡೆಯಲು ಕಾರಣರಾದ ಎಲ್ಲ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳನ್ನ ಅಭಿನಂದಿಸಿದ್ದಾರೆ‌.

Follow Us
Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More