‘ಬಿಗ್ ಬಾಸ್ ಅಗ್ನಿಪರೀಕ್ಷೆ’; 72 ವರ್ಷದ ರತ್ನ ಹಾಗೂ 20 ವರ್ಷ ಕುಮಾರಿ ಪಾಸ್

Updated on: Aug 13, 2026 | 12:52 PM

ಕನ್ನಡ ಕಿರುತೆರೆಯ ಬಹುನಿರೀಕ್ಷಿತ 'ಬಿಗ್ ಬಾಸ್ ಅಗ್ನಿಪರೀಕ್ಷೆ' ಶೋನಲ್ಲಿ ಈ ಬಾರಿಯ ಸ್ಪರ್ಧೆಗೆ ವಯಸ್ಸಿನ ಮಿತಿ ಇಲ್ಲದಿರುವುದು ಪ್ರೇಕ್ಷಕರ ಗಮನ ಸೆಳೆದಿದೆ. ವಿವಿಧ ಹಿನ್ನೆಲೆ ಹಾಗೂ ವಯೋಮಾನದ ಸ್ಪರ್ಧಿಗಳು ಭಾಗವಹಿಸುತ್ತಿದ್ದು, ವೇದಿಕೆಯಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಆ ವಿಡಿಯೋ ಗಮನ ಸೆಳೆದಿದೆ. ಈ ವಾರ ಶೋ ಆರಂಭ ಆಗುತ್ತಿದೆ.

ಬಿಗ್ ಬಾಸ್​​ನಲ್ಲಿ 60 ಸ್ಪರ್ಧಿಗಳ ಮಧ್ಯೆ ಅಗ್ನಿಪರೀಕ್ಷೆ ನಡೆಯುತ್ತಿದೆ. ಈ ಶೋನಲ್ಲಿ 72 ವರ್ಷದ ರತ್ನ ಹಾಗೂ 20 ವರ್ಷದ ಕುಮಾರಿ ಎಂಬಿಬ್ಬರು ಸ್ಪರ್ಧಿಗಳು ತಮ್ಮ ವಿಶಿಷ್ಟ ಆಕರ್ಷಣೆ ಹಾಗೂ ವ್ಯಕ್ತಿತ್ವದ ಮೂಲಕ ಗಮನ ಸೆಳೆದಿದ್ದಾರೆ. 72 ವರ್ಷದ ರತ್ನ ಅವರು ತಮ್ಮ ವಯಸ್ಸನ್ನೂ ಲೆಕ್ಕಿಸದೆ ಪೂರ್ಣ ಉತ್ಸಾಹದಿಂದ ವೇದಿಕೆಯಲ್ಲಿ ಕುಣಿದು ಕುಪ್ಪಳಿಸುವ ಮೂಲಕ ಜಡ್ಜ್‌ಗಳ ಮೆಚ್ಚುಗೆಗೆ ಪಾತ್ರರಾದರು. ಮತ್ತೊಂದೆಡೆ 20 ವರ್ಷದ ಕುಮಾರಿ ತಮ್ಮ ಮುಗ್ಧತೆ ಹಾಗೂ ತೀಕ್ಷ್ಣ ಮಾತುಗಳಿಂದ ತೀರ್ಪುಗಾರರ ಮನಗೆದ್ದು ‘ಸ್ಟಾರ್ ಕಂಟೆಸ್ಟೆಂಟ್’ ಆಗಿ ಆಯ್ಕೆಯಾಗಿದ್ದಾರೆ.

ಈ ಇಬ್ಬರೂ ಸ್ಪರ್ಧಿಗಳ ಎನರ್ಜಿ ಹಾಗೂ ಚಾರ್ಮ್ ಕಂಡ ಜಡ್ಜ್‌ಗಳು ಗ್ರೀನ್ ಸಿಗ್ನಲ್ ನೀಡಿ ಮುಂದಿನ ಹಂತಕ್ಕೆ ಆಯ್ಕೆ ಮಾಡಿದ್ದಾರೆ. ‘ಬಿಗ್ ಬಾಸ್ ಅಗ್ನಿಪರೀಕ್ಷೆ’ ಪ್ರೋಮೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾನುವಾರ ರಾತ್ರಿ 9 ಗಂಟೆಗೆ ಕಲರ್ಸ್ ಕನ್ನಡದಲ್ಲಿ ಎಪಿಸೋಡ್ ಬಿತ್ತರವಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More