AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಡ್ ವೀಕ್ ಎಲಿಮಿನೇಷನ್​ನಲ್ಲಿ ಬಿಗ್ ಬಾಸ್ ಮನೆಯಿಂದ ಹೊರಹೋಗಿದ್ದು ಯಾರು? ಕಣ್ಣೀರು ಹಾಕಿದ ಜಗದೀಶ್

ಮಿಡ್ ವೀಕ್ ಎಲಿಮಿನೇಷನ್​ನಲ್ಲಿ ಬಿಗ್ ಬಾಸ್ ಮನೆಯಿಂದ ಹೊರಹೋಗಿದ್ದು ಯಾರು? ಕಣ್ಣೀರು ಹಾಕಿದ ಜಗದೀಶ್

ರಾಜೇಶ್ ದುಗ್ಗುಮನೆ
|

Updated on: Sep 24, 2026 | 9:57 AM

Share

ಬಿಗ್ ಬಾಸ್ ಕನ್ನಡ ಮನೆಯಲ್ಲಿ 'ಎಮರ್ಜೆನ್ಸಿ ಎಕ್ಸಿಟ್' ಮೂಲಕ ಹಠಾತ್ ಎಲಿಮಿನೇಷನ್ ನಡೆದು ಮನೆಮಂದಿಗೆ ತೀವ್ರ ಆಘಾತವಾಗಿದೆ. ಪ್ರತಿಯೊಬ್ಬ ಸ್ಪರ್ಧಿಯೂ ನೇರ ನಾಮಿನೇಟ್ ಆಗಿದ್ದರಿಂದ ಯಾರು ಹೊರಬೀಳಲಿದ್ದಾರೆ ಎಂಬ ತೀವ್ರ ಕುತೂಹಲ ವೀಕ್ಷಕರಲ್ಲಿ ಮೂಡಿದೆ. ನಟ ಸುದೀಪ್ ನೀಡಿದ್ದ ಎಚ್ಚರಿಕೆಯಂತೆ ವಾರದ ಮಧ್ಯದಲ್ಲೇ ಎಲಿಮಿನೇಷನ್ ಪ್ರಕ್ರಿಯೆ ನಡೆದು ಬಿಗ್ ಬಾಸ್ ಆಟದ ವಾತಾವರಣವೇ ಸಂಪೂರ್ಣ ಬದಲಾಗಿದೆ.

ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ಇದೀಗ ರೋಚಕ ಟ್ವಿಸ್ಟ್ ಎದುರಾಗಿದ್ದು, ಮನೆಮಂದಿಗೆ ‘ಎಮರ್ಜೆನ್ಸಿ ಎಕ್ಸಿಟ್’ ಶಾಕ್ ನೀಡಲಾಗಿದೆ. ವಾರದ ಮಧ್ಯದಲ್ಲೇ ಬಿಗ್ ಬಾಸ್ ಮನೆಯಲ್ಲಿ ಎಲಿಮಿನೇಷನ್ ನಡೆದಿದೆ. ಯಾರು ಮನೆಯಿಂದ ಹೊರ ಹೋಗಿದ್ದಾರೆ ಅನ್ನೋದು ಇಂದಿನ ಎಪಿಸೋಡ್​​ನಲ್ಲಿ ಪ್ರಸಾರ ಆಗಲಿದೆ.

ಈ ವಾರ ಬಿಗ್ ಬಾಸ್ ಕಡೆಯಿಂದ ಪ್ರತಿಯೊಬ್ಬ ಸ್ಪರ್ಧಿಯನ್ನೂ ನೇರವಾಗಿ ನಾಮಿನೇಟ್ ಮಾಡಲಾಗಿದೆ. ವಿವಿಧ ಟಾಸ್ಕ್ ನೀಡಿ ಕೆಲವರಿಗೆ ಸೇಫ್ ಆಗುವ ಅವಕಾಶ ನೀಡಲಾಗಿದೆ. ‘ಈ ವಾರ ಮನೆಯಲ್ಲಿ ಯಾರು ಉಳಿಯುತ್ತಾರೆ ಎಂಬ ಭರವಸೆ ಇಲ್ಲ. ಯಾವಾಗ ಬೇಕಾದರೂ, ಯಾರು ಬೇಕಾದರೂ ಮನೆಯಿಂದ ಹೊರಬೀಳುತ್ತಾರೆ’ ಎಂದು ಸುದೀಪ್ ಎಚ್ಚರಿಸಿದ್ದರು. ಅದು ಈಗ ನಿಜವಾಗಿದೆ. ಈ ಹಠಾತ್ ಎಮರ್ಜೆನ್ಸಿ ಎಕ್ಸಿಟ್ ನಿರ್ಧಾರದಿಂದಾಗಿ ಬಿಗ್ ಬಾಸ್ ಮನೆಯಲ್ಲಿ ಆಟದ ವಾತಾವರಣ ಸಂಪೂರ್ಣ ಬದಲಾಗಿದ್ದು, ಈ ವಾರ ಯಾರು ದೊಡ್ಮನೆಯಿಂದ ನಿರ್ಗಮಿಸಿದ್ದಾರೆ ಎಂಬ ಕುತೂಹಲ ವೀಕ್ಷಕರಲ್ಲಿ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More