ಒಡೆದ ತುಂಗಭದ್ರಾ ಎಡದಂಡೆ ಕಾಲುವೆ, ಸಿಕ್ತು ಬೃಹತ್ ಗಾತ್ರದ​ ಮೀನು

Edited By:

Updated on: Mar 18, 2026 | 9:00 PM

ನಾಲ್ಕೈದು ಜಿಲ್ಲೆಗಳ ಕೃಷಿ ಮತ್ತು ಕುಡಿಯುವ ನೀರಿನ ಜೀವನಾಡಿಯಾಗಿರುವ ತುಂಗಭದ್ರ ಜಲಾಶಯದ ಎಡದಂಡೆ ಮುಖ್ಯ ಕಾಲುವೆ ಭಾರಿ ಪ್ರಮಾಣದಲ್ಲಿ ಒಡೆದಿದೆ. ಕುಡಿಯುವ ನೀರಿನ ಉದ್ದೇಶಕ್ಕೆ ಕಾಲುವೆಗೆ ಜಲಾಶಯದ ಅಧಿಕಾರಿಗಳು ನೀರು ಬಿಟ್ಟಿದ್ದರು. ಒಟ್ಟು ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ಕಾಲುವೆಯಿಂದ ನೀರು ಬಿಡಲಾಗಿತ್ತು. ಆದರೆ ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದ ಬಳಿ ಕಾಲುವೆ ಒಡೆದಿದ್ದು, ನೀರು ಪಕ್ಕದ ಜಮೀನು ಹಾಗೂ ರೆಸಾರ್ಟ್ ಗಳಿಗೆ ನೀರು ನುಗ್ಗಿದೆ. ಇನ್ನು ಇದೇ ವೇಲೆ ಸ್ಥಳೀಯರ ಬಲೆಗೆ ಬೃಹತ್ ಮೀನು ಬಿದ್ದಿದೆ. ಸುಮಾರು 15ರಿಂದ 20 ಕೆಜಿ ತೂಕದ ಮೀನು ಸಿಕ್ಕಿದ್ದು, ಫುಲ್ ಖುಷ್ ಆಗಿದ್ದಾರೆ.

ಕೊಪ್ಪಳ, (ಮಾರ್ಚ್ 18): ನಾಲ್ಕೈದು ಜಿಲ್ಲೆಗಳ ಕೃಷಿ ಮತ್ತು ಕುಡಿಯುವ ನೀರಿನ ಜೀವನಾಡಿಯಾಗಿರುವ ತುಂಗಭದ್ರ ಜಲಾಶಯದ ಎಡದಂಡೆ ಮುಖ್ಯ ಕಾಲುವೆ ಭಾರಿ ಪ್ರಮಾಣದಲ್ಲಿ ಒಡೆದಿದೆ. ಕುಡಿಯುವ ನೀರಿನ ಉದ್ದೇಶಕ್ಕೆ ಕಾಲುವೆಗೆ ಜಲಾಶಯದ ಅಧಿಕಾರಿಗಳು ನೀರು ಬಿಟ್ಟಿದ್ದರು. ಒಟ್ಟು ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ಕಾಲುವೆಯಿಂದ ನೀರು ಬಿಡಲಾಗಿತ್ತು. ಆದರೆ ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದ ಬಳಿ ಕಾಲುವೆ ಒಡೆದಿದ್ದು, ನೀರು ಪಕ್ಕದ ಜಮೀನು ಹಾಗೂ ರೆಸಾರ್ಟ್ ಗಳಿಗೆ ನೀರು ನುಗ್ಗಿದೆ. ಇನ್ನು ಇದೇ ವೇಲೆ ಸ್ಥಳೀಯರ ಬಲೆಗೆ ಬೃಹತ್ ಮೀನು ಬಿದ್ದಿದೆ. ಸುಮಾರು 15ರಿಂದ 20 ಕೆಜಿ ತೂಕದ ಮೀನು ಸಿಕ್ಕಿದ್ದು, ಫುಲ್ ಖುಷ್ ಆಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More