ಲೋಯರ್ ಕೋರ್ಟ್ ಆದೇಶವನ್ನು ಹೈಕೋರ್ಟ್ ಪಕ್ಕಕ್ಕಿರಿಸಿರುವುದು ನಿರಾಳತೆ ಒದಗಿಸಿದೆ: ವಿಜಯೇಂದ್ರ

ಅರುಣ್​ ಕುಮಾರ್​ ಬೆಳ್ಳಿ

Updated on: Feb 07, 2025 | 12:39 PM

ಮಹಿಳೆಯೊಬ್ಬರು ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಸ್ಟೇಷನ್ ನಲ್ಲಿ ದೂರು ನೀಡಿದ ಬಳಿಕ ಅವರ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿತ್ತು. ಮಾಜಿ ಮುಖ್ಯಮಂತ್ರಿಯವರಿಗೆ ಪೋಕ್ಸೋ ಪ್ರಕರಣದಲ್ಲಿ ರಿಲೀಫ್ ಸಿಕ್ಕರೆ ಮುಡಾ ಪ್ರಕರಣದಲ್ಲಿ ಆರೋಪಿಯಾಗಿರುವ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ನಿರಾಳತೆ ಲಭಿಸಿದೆ, ಸಿಬಿಐ ತನಿಖೆಗೊಪ್ಪಿಸುವ ಅರ್ಜಿಯನ್ನು ಕೋರ್ಟ್ ಪಕ್ಕಕಿರಿಸಿದೆ.

ಬೆಂಗಳೂರು: ಬಿಎಸ್ ಯಡಿಯೂರಪ್ಪನವರಿಗೆ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿಗೆ ಉಚ್ಚ ನ್ಯಾಯಾಲಯದಿಂದ ರಿಲೀಫ್ ಸಿಕ್ಕಿದೆ. ಕೋರ್ಟ್ ವಿಚಾರಣೆ ನಡೆಸುತ್ತಿದ್ದ ಸಮಯದಲ್ಲಿ ಯಡಿಯೂರಪ್ಪ ನಿವಾಸದಲ್ಲಿ ಇದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕೆಳಹಂತದ ಕೋರ್ಟ್ ಯಡಿಯೂರಪ್ಪ ಅವರ ವಿರುದ್ಧ ಜಾರಿ ಮಾಡಿದ್ದ ಸಮನ್ಸ್ ಅನ್ನು ರಾಜ್ಯ ಉಚ್ಚ ನ್ಯಾಯಾಲಯವು ತಮ್ಮ ಅರ್ಜಿಯನ್ನು ಪುರಸ್ಕರಿಸಿ ಲೋಯರ್ ಕೋರ್ಟ್ ಅದೇಶವನ್ನು ಪಕ್ಕಕಿರಿಸಿದೆ, ಪ್ರಕರಣದ ಪುನರ್ ಪರಿಶೀಲನೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಯಡಿಯೂರಪ್ಪರಿಗೆ ವಯಸ್ಸಾಯ್ತು ಎನ್ನುವ ಬಸನಗೌಡ ಯತ್ನಾಳ್ ಇನ್ನೂ ಯುವಕನೇ? ರೇಣುಕಾಚಾರ್ಯ

Published on: Feb 07, 2025 12:38 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.