RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕಾನೂನು ಕ್ರಮದ ಎಚ್ಚರಿಕೆ
ಐಪಿಎಲ್ ಫೈನಲ್ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಸಾರ್ವಜನಿಕ ಸಂಭ್ರಮಾಚರಣೆಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಆರ್ಸಿಬಿ ಪಂದ್ಯ ಗೆದ್ದರೂ ರಸ್ತೆಗಳಲ್ಲಿ ಸಂಭ್ರಮಾಚರಣೆ, ಡ್ರಂಕ್ ಅಂಡ್ ಡ್ರೈವಿಂಗ್, ಪಟಾಕಿ ಸಿಡಿಸುವುದಕ್ಕೆ ಅವಕಾಶವಿಲ್ಲ. ಮನೆಯಲ್ಲೇ, ಕ್ಲಬ್‌ಗಳಲ್ಲಿ ಆಚರಿಸಲು ಸೂಚಿಸಲಾಗಿದ್ದು, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ.
ಬೆಂಗಳೂರು, ಮೇ 30: ನಾಳೆ ಆರ್ಸಿಬಿ (RCB) VS ಜಿಟಿ ತಂಡಗಳ ಮಧ್ಯೆ ಹೈವೋಲ್ಟೇಜ್ ಐಪಿಎಲ್ ಫೈನಲ್ ಪಂದ್ಯ ನಡೆಯಲಿದೆ. ಇತ್ತ ನಗರದಲ್ಲಿ ಬೆಂಗಳೂರು ನಗರ ಪೊಲೀಸರು ಅತ್ಯಂತ ಕಠಿಣ ಸುರಕ್ಷತಾ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್, ನಾಳೆ ಐಪಿಎಲ್ ಫೈನಲ್ ಮ್ಯಾಚ್ ನಡೆಯಲಿದೆ. ಬೆಂಗಳೂರು ಪೊಲೀಸರಿಗೆ ಸಲಹೆ, ಸೂಚನೆ ನೀಡಿದ್ದೇನೆ. ಅಭಿಮಾನಿಗಳ ಸೆಲೆಬ್ರೇಷನ್ನಿಂದ ಬೇರೆ ಅವರಿಗೆ ತೊಂದರೆ ಆಗಬಾರದು. ಎಲ್ಲರೂ ತಮ್ಮ ತಮ್ಮ ಮನೆ, ಕ್ಲಬ್‌ಗಳಲ್ಲಿ ಮಾಡಿಕೊಳ್ಳಿ. ರಸ್ತೆಯಲ್ಲಿ ಸೆಲೆಬ್ರೇಷನ್ಗೆ ಅವಕಾಶವಿಲ್ಲ. ಒಂದು ವೇಳೆ ಹಾಗೇನಾದರೂ ಕಂಡುಬಂದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಡಿಡಿ ಚೆಕ್ಕಿಂಗ್ ಕಠಿಣವಾಗಿ ಮಾಡುತ್ತೇವೆ. ಜನ ಸೇರಿದರೆ ಕಂಟ್ರೋಲ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಟ್ಟಿನಲ್ಲಿ ಎಲ್ಲಾ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.
ವರದಿ: ವಿಕಾಸ್ ಟಿವಿ9 ಕ್ರೈಂ
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
