Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯೋತ್ಪಾದನೆ ವಿರುದ್ಧ ನಮ್ಮ ಸರ್ಕಾರದ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ

ಭಯೋತ್ಪಾದನೆ ವಿರುದ್ಧ ನಮ್ಮ ಸರ್ಕಾರದ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ

ಸುಷ್ಮಾ ಚಕ್ರೆ
|

Updated on: Apr 10, 2025 | 7:06 PM

ಮುಂಬೈ ದಾಳಿಯ ಆರೋಪಿ ತಹವ್ವೂರ್ ರಾಣಾ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆ ಆರೋಪಿ ಮುಂಬೈ ದಾಳಿಯಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಬಹಿರಂಗಪಡಿಸಲು ಸಹಾಯ ಮಾಡುತ್ತಾರೆ ಎಂದು ಹೇಳಿದ್ದಾರೆ. 26/11 ಮುಂಬೈ ದಾಳಿಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನೂ ಬಹಿರಂಗಪಡಿಸಲು ತಹವ್ವೂರ್ ರಾಣಾ ಅವರ ಹಸ್ತಾಂತರವು ಸಹಾಯ ಮಾಡುತ್ತದೆ ಎಂದು ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ನವದೆಹಲಿ, ಏಪ್ರಿಲ್ 10: 2008ರಲ್ಲಿ ನಡೆದ ಮುಂಬೈ ದಾಳಿಯ ಆರೋಪಿಯನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದೆ. ಭಾರತಕ್ಕೆ ಹಸ್ತಾಂತರವಾಗಿರುವ ರಾಣಾ ಅವರನ್ನು ಇಂದು ದೆಹಲಿಗೆ ಕರೆತರಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ, “ನಮ್ಮ ಸರ್ಕಾರವು ನಕ್ಸಲಿಸಂ ಮತ್ತು ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣುತೆಯ ವಿಧಾನವನ್ನು ಹೊಂದಿದೆ. ರಾಣಾ ಹಸ್ತಾಂತರ ಭಯೋತ್ಪಾದನೆಯ ವಿರುದ್ಧದ ಹೋರಾಟದತ್ತ ಒಂದು ದೊಡ್ಡ ಹೆಜ್ಜೆಯಾಗಿದೆ. 26/11 ಮುಂಬೈ ದಾಳಿಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನೂ ಬಹಿರಂಗಪಡಿಸಲು ತಹವ್ವೂರ್ ರಾಣಾ ಅವರ ಹಸ್ತಾಂತರವು ಸಹಾಯ ಮಾಡುತ್ತದೆ ” ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ