Bagalkot: ಮಹಾಲಿಂಗಪುರದಲ್ಲಿ ಭಾರೀ ಮಳೆಗಾಳಿಯಿಂದ ಮನೆಗಳ ಮೇಲೆ ಉರುಳಿಬಿದ್ದ ಮರ, ಯಾವುದೇ ಪ್ರಾಣಾಪಾಯವಿಲ್ಲ

ಅರುಣ್​ ಕುಮಾರ್​ ಬೆಳ್ಳಿ

Updated on: Jun 02, 2023 | 10:51 AM

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವುಂಟಾಗಿಲ್ಲ. ಒಂದಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಸ್ಥಳೀಯರು ಹೇಳುತ್ತಾರೆ.

ಬಾಗಲಕೋಟೆ: ಪ್ರಕೃತಿ ಅದ್ಯಾಕೆ ಕನ್ನಡಿಗರ ಮೇಲೆ ಈ ಪಾಟಿ ಮುನಿಸಿಕೊಂಡಿದೆ ಅಂತ ಅರ್ಥವಾಗುತ್ತಿಲ್ಲ. ಮೇ ಮತ್ತು ಜೂನ್ ತಿಂಗಳಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆ (untimely rains) ಬೆಳೆಗಳನ್ನು ಹಾಳುಮಾಡುತ್ತಿದೆ, ಮನೆಗಳು ಕುಸಿದು ಬೀಳುವಂತೆ ಮತ್ತು ಮರಗಿಡಗಳನ್ನು ಬುಡಸಮೇತ ಉರುಳಿ ಬೀಳುವಂತೆ ಮಾಡುತ್ತಿದೆ. ನಿನ್ನೆ ರಾತ್ರಿ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರದಲ್ಲಿ (Mahalingapur) ಬಿರುಗಾಳಿ ಮತ್ತು ಭಾರೀ ಮಳೆಯಿಂದಾಗಿ (heavy rains) ಬಡಾವಣೆಯೊಂದರಲ್ಲಿದ್ದ ಭಾರೀ ಗಾತ್ರದ ಮರ 4-5 ಮನೆಗಳ ಮೇಲೆ ಉರುಳಿ ಬಿದ್ದಿದೆ. ಮರ ಬಿದ್ದ ಭಾರಕ್ಕೆ ಮನೆಗಳು ಬಿದ್ದುಹೋಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವುಂಟಾಗಿಲ್ಲ. ಒಂದಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಸ್ಥಳೀಯರು ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.