ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಕೊಟ್ಟ ಆ್ಯಂಬುಲೆನ್ಸ್ ಡ್ರೈವರ್, ಸ್ಫೋಟಕ ಅಂಶ ಬಹಿರಂಗ
ಧರ್ಮಸ್ಥಳ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಹೌದು... ಧರ್ಮಸ್ಥಳ ಗ್ರಾಮ ಪಂಚಾಯ್ತಿ ಸುತ್ತಾಮುತ್ತ ನೂರಾರು ಶವಗಳನ್ನು ಹೂತಿಡಲಾಗಿದೆ ಎಂಬ ಆರೋಪ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣದ ತನಿಖೆ ನಡೆಸುತ್ತಿರೋ ಎಸ್ಐಟಿಗೆ ಮತ್ತೊಂದು ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಸುಜಾತ ಭಟ್ ದೂರಿನ ಹಿಂದೆ ಪ್ರಭಾವಿ ನಟನ ಸಹೋದರನ ಕೈವಾಡವಿರೋ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಮತ್ತೊಂದೆಡೆ ಅಪರಿಚಿತರ ಶವಗಳನ್ನು ಸಾಗಿಸಿದ ಹಿನ್ನೆಲೆಯಲ್ಲಿ ಇಬ್ಬರು ಆ್ಯಂಬುಲೆನ್ಸ್ ಚಾಲಕರನ್ನು ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಆ್ಯಂಬುಲೆನ್ಸ್ ಡ್ರೈವರ್ ಜಲೀಲ್ ಬಾಬ ಸ್ಫೋಟಕ ಅಂಶ ಬಿಚ್ಚಿಟ್ಟಿದ್ದಾರೆ.
ಮಂಗಳೂರು, ಅಕ್ಟೋಬರ್ 06): ಧರ್ಮಸ್ಥಳ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಹೌದು… ಧರ್ಮಸ್ಥಳ ಗ್ರಾಮ ಪಂಚಾಯ್ತಿ ಸುತ್ತಾಮುತ್ತ ನೂರಾರು ಶವಗಳನ್ನು ಹೂತಿಡಲಾಗಿದೆ ಎಂಬ ಆರೋಪ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣದ ತನಿಖೆ ನಡೆಸುತ್ತಿರೋ ಎಸ್ಐಟಿಗೆ ಮತ್ತೊಂದು ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಸುಜಾತ ಭಟ್ ದೂರಿನ ಹಿಂದೆ ಪ್ರಭಾವಿ ನಟನ ಸಹೋದರನ ಕೈವಾಡವಿರೋ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಮತ್ತೊಂದೆಡೆ ಅಪರಿಚಿತರ ಶವಗಳನ್ನು ಸಾಗಿಸಿದ ಹಿನ್ನೆಲೆಯಲ್ಲಿ ಇಬ್ಬರು ಆ್ಯಂಬುಲೆನ್ಸ್ ಚಾಲಕರನ್ನು ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಆ್ಯಂಬುಲೆನ್ಸ್ ಡ್ರೈವರ್ ಜಲೀಲ್ ಬಾಬ ಸ್ಫೋಟಕ ಅಂಶ ಬಿಚ್ಚಿಟ್ಟಿದ್ದಾರೆ.
