ಡಿಜೆ ಹಳ್ಳಿಯಲ್ಲಿ ಹಸುಗಳ‌ ಶೆಡ್​​ಗೆ ಬೆಂಕಿ: ವಿಕೃತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ

Updated on: Apr 08, 2026 | 8:12 PM

ಡಿಜೆ ಹಳ್ಳಿ (DJ Halli) ಬಳಿ ಇರುವ ಶಾಂಪುರ ರಸ್ತೆಯಲ್ಲಿ ನಿನ್ನೆ (ಏಪ್ರಿಲ್ 07) ಅಗ್ನಿ ದುರಂತವೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಆರು ಹಸುಗಳು (Cows) ಸಾವನ್ನಪ್ಪಿದ್ದವು. ಶೆಡ್​​​​ನಲ್ಲಿದ್ದ 20 ಹಸುಗಳ ಪೈಕಿ ಆರು ಮೂಕಜೀವಿಗಳು ಬೆಂಕಿಯ (Fire) ಜ್ವಾಲೆಗೆ ನರಳಿ ಪ್ರಾಣ ಬಿಟ್ಟಿದ್ದಾವೆ. ಮೊದಲು ಆಕಸ್ಮಿಕವಾಗಿ ಬೆಂಕಿ ತಗುಲಿ ಈ ಅವಘಡ ನಡೆದಿದೆ ಎನ್ನಲಾಗಿತ್ತು. ಆದರೀಗ ಈ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​​ ಸಿಕ್ಕಿದ್ದು, ಬೇಕಂತಲೇ ಕಿರಾತಕನೊಬ್ಬ ಹಸುಗಳಿದ್ದ ಶೆಡ್​ಗೆ ಬೆಂಕಿ ಇಟ್ಟು ಪರಾರಿಯಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. . ಸದ್ಯ ಘಟನೆ ಸಂಬಂಧ ಡಿಜೆ ಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದು, ಬೆಂಕಿ ಇಟ್ಟು ಮೂಕಪ್ರಾಣಿಗಳನ್ನ ಬಲಿಪಡೆದ ವಿಕೃತನಿಗೆ ಬಲೆ ಬೀಸಿದ್ದಾರೆ.

ಬೆಂಗಳೂರು, (ಏಪ್ರಿಲ್ 08): ನಗರದ ಡಿಜೆ ಹಳ್ಳಿ (DJ Halli) ಬಳಿ ಇರುವ ಶಾಂಪುರ ರಸ್ತೆಯಲ್ಲಿ ನಿನ್ನೆ (ಏಪ್ರಿಲ್ 07) ಅಗ್ನಿ ದುರಂತವೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಆರು ಹಸುಗಳು (Cows) ಸಾವನ್ನಪ್ಪಿದ್ದವು. ಶೆಡ್​​​​ನಲ್ಲಿದ್ದ 20 ಹಸುಗಳ ಪೈಕಿ ಆರು ಮೂಕಜೀವಿಗಳು ಬೆಂಕಿಯ (Fire) ಜ್ವಾಲೆಗೆ ನರಳಿ ಪ್ರಾಣ ಬಿಟ್ಟಿದ್ದಾವೆ. ಮೊದಲು ಆಕಸ್ಮಿಕವಾಗಿ ಬೆಂಕಿ ತಗುಲಿ ಈ ಅವಘಡ ನಡೆದಿದೆ ಎನ್ನಲಾಗಿತ್ತು. ಆದರೀಗ ಈ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​​ ಸಿಕ್ಕಿದ್ದು, ಬೇಕಂತಲೇ ಕಿರಾತಕನೊಬ್ಬ ಹಸುಗಳಿದ್ದ ಶೆಡ್​ಗೆ ಬೆಂಕಿ ಇಟ್ಟು ಪರಾರಿಯಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. . ಸದ್ಯ ಘಟನೆ ಸಂಬಂಧ ಡಿಜೆ ಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದು, ಬೆಂಕಿ ಇಟ್ಟು ಮೂಕಪ್ರಾಣಿಗಳನ್ನ ಬಲಿಪಡೆದ ವಿಕೃತನಿಗೆ ಬಲೆ ಬೀಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published on: Apr 08, 2026 08:11 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More