ವಿನಯ್​ನೇ ನಾಮಿನೇಟ್ ಮಾಡಿದ ಸ್ಪರ್ಧಿ; ಸ್ಟಾರ್ಟಪ್ ಕಾರಣ ನೀಡಿದ ಕಂಟೆಸ್ಟಂಟ್

Updated on: Aug 18, 2026 | 11:40 AM

ಕಲರ್ಸ್ ಕನ್ನಡ ವಾಹಿನಿಯಲ್ಲಿ ಬಿಗ್ ಬಾಸ್ ಅಗ್ನಿಪರೀಕ್ಷೆ ರಿಯಾಲಿಟಿ ಶೋ ಪ್ರಸಾರವಾಗುತ್ತಿದೆ. ಈ ಶೋನ ಹೊಸ ಪ್ರೋಮೋ ಬಿಡುಗಡೆಯಾಗಿದೆ. ಪ್ರೋಮೋದಲ್ಲಿ ನಾಮಿನೇಷನ್ ಕಾಳಗ ತೀವ್ರಗೊಂಡಿದೆ. ಸ್ಪರ್ಧಿಗಳ ನಡುವಿನ ಜಟಾಪಟಿ ವೀಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಜಡ್ಜ್‌ಗಳ ಎದುರಲ್ಲೇ ಸ್ಪರ್ಧಿಗಳು ಪರಸ್ಪರ ವಾಗ್ದಾಳಿ ನಡೆಸಿದ್ದಾರೆ. ಪ್ರೋಮೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

ಕಲರ್ಸ್ ಕನ್ನಡದಲ್ಲಿ ಬಿಗ್ ಬಾಸ್ ಅಗ್ನಿಪರೀಕ್ಷೆ ನಡೆಯುತ್ತಿದೆ. ವೇದಿಕೆಯಲ್ಲಿ ಆಡಿಷನ್ ನಡೆಸುವಾಗ ನಾಮಿನೇಷನ್ ಟಾಸ್ಕ್ ಕೊಡಲಾಗಿದೆ. ಸ್ಪರ್ಧಿಗಳು ತಮಗೆ ಇಷ್ಟವಿಲ್ಲದ ಜಡ್ಜ್​ ಫೋಟೋಗಳನ್ನು ಬೆಂಕಿಗೆ ಹಾಕಿದ್ದಾರೆ. ಪ್ರತಿಯೊಬ್ಬ ಸ್ಪರ್ಧಿಯೂ ತಮ್ಮದೇ ಆದ ಕಾರಣಗಳನ್ನು ನೀಡುತ್ತಿದ್ದಾರೆ.

ತೀರ್ಪುಗಾರರ ಸೀಟ್‌ನಲ್ಲಿ ಶ್ರುತಿ, ವಿನಯ್ ಗೌಡ, ಸಂಗೀತಾ ಶೃಂಗೇರಿ ಹಾಗೂ ಚಂದನ್ ಶೆಟ್ಟಿ ಇದ್ದಾರೆ. ಜಡ್ಜ್​​ಗಳನ್ನು ನಾಮಿನೇಟ್ ಮಾಡುವಂತೆ ಸ್ಪರ್ಧಿಗಳಿಗೆ ಟಾಸ್ಕ್ ನೀಡಲಾಯಿತು. ವಿನಯ್ ತಮ್ಮ ಸೀಸನ್​ ಅಲ್ಲಿ 35 ಸ್ಟಾರ್ಟ್​​ಅಪ್ ಕಂಪನಿ ಇದೆ ಎಂದು ಹೇಳಿಕೊಂಡಿದ್ದರು. ಇದೇ ವಿಷಯ ಇಟ್ಟುಕೊಂಡು ಸ್ಪರ್ಧಿಗಳು ಜಡ್ಜ್​ಗಳನ್ನು ನಾಮಿನೇಟ್ ಮಾಡಲಾಗಿದೆ.

ಈ ಕಾರ್ಯಕ್ರಮವು ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದೆ. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9:30ಕ್ಕೆ ಪ್ರಸಾರವಾಗುತ್ತದೆ. ಶನಿವಾರ ಮತ್ತು ಭಾನುವಾರ ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ. ಬಿಗ್ ಬಾಸ್ ಪ್ರೇಮಿಗಳು ಈ ಶೋವನ್ನು ಕುತೂಹಲದಿಂದ ವೀಕ್ಷಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Aug 18, 2026 11:40 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More