‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು ಹಾಕಿದ ಸ್ಪರ್ಧಿಗಳು
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಶಾಕಿಂಗ್ ಬೆಳವಣಿಗೆ ನಡೆದಿದೆ. ಸ್ಪರ್ಧಿಗಳೆಲ್ಲರೂ ಜಗದೀಶ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದರಿಂದ ಜಗದೀಶ್ ಕೋಪಗೊಂಡಿದ್ದು ಮಹಿಳಾ ಸ್ಪರ್ಧಿಗಳ ವಿರುದ್ಧ ಅಶ್ಲೀಲ ಪದಗಳ ಬಳಕೆ ಮಾಡಿದ್ದಾರೆ. ಈ ಮಧ್ಯೆ ರಂಜಿತ್ ಅವರು ಜಗದೀಶ್ ಅವರನ್ನು ತಳ್ಳಿದ್ದಾರೆ. ಇದನ್ನು ಗಮನಿಸಿದ ಬಿಗ್ ಬಾಸ್ ಇಬ್ಬರನ್ನು ಹೊರಹಾಕಿದ್ದಾರೆ.
ಹೆಣ್ಣುಮಕ್ಕಳ ಬಗ್ಗೆ ಅವಾಚ್ಯ ಶಬ್ದ ಬಳಕೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಜಗದೀಶ್ ಅವರನ್ನು ಹಾಗೂ ಜಗದೀಶ್ನ ತಳ್ಳಿದ ವಿಚಾರಕ್ಕೆ ಸಂಬಂಧಿಸಿ ರಂಜಿತ್ನ ಬಿಗ್ ಬಾಸ್ನಿಂದ ಹೊರಕ್ಕೆ ಕಳಿಸಲಾಗುತ್ತಿದೆ. ಈ ಎಲ್ಲಾ ವಿಚಾರವನ್ನು ಬಿಗ್ ಬಾಸ್ ಗಂಭೀರವಾಗಿ ಸ್ವೀಕರಿಸಿದ್ದಾರೆ. ಇವರನ್ನು ಹೊರಕ್ಕೆ ಕಳಿಸೋ ಆದೇಶವನ್ನು ಬಿಗ್ ಬಾಸ್ ನೀಡಿದ್ದಾರೆ. ‘ಇನ್ನೊಂದು ಅವಕಾಶ ಕೊಡಿ ಪ್ಲೀಸ್’ ಎಂದು ಬಿಗ್ ಬಾಸ್ ಬಳಿ ಸ್ಪರ್ಧಿಗಳು ಕೋರಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos