ಬಿಗ್ ಬಾಸ್ ವೇದಿಕೆಯಲ್ಲಿ ಸುದೀಪ್ ಜೊತೆ ಕನ್ನಡದಲ್ಲಿ ವಿಜಯ್ ಸೇತುಪತಿ ಮಾತು

Updated on: Sep 06, 2026 | 9:26 AM

ನಾಲ್ಕೂ ಭಾಷೆಯ ಬಿಗ್ ಬಾಸ್ ನಿರೂಪಕರು ಒಂದೇ ವೇದಿಕೆಯಲ್ಲಿ ಸೇರಿದ್ದಾರೆ. ಮೋಹನ್​ಲಾಲ್, ವಿಜಯ್ ಸೇತುಪತಿ, ನಾಗಾರ್ಜುನ ಮತ್ತು ಕಿಚ್ಚ ಸುದೀಪ್ ಅವರು ಪರಸ್ಪರ ಮಾತನಾಡಿಕೊಂಡಿದ್ದಾರೆ. ಈ ವೇಳೆ ವಿಜಯ್ ಸೇತುಪತಿ ಅವರು ಕನ್ನಡದಲ್ಲಿ ಮಾತನಾಡಿದ್ದು ವಿಶೇಷವಾಗಿದೆ. ಮೊದಲ ಸಂಚಿಕೆಯ ಪ್ರೋಮೋ ಇಲ್ಲಿದೆ ನೋಡಿ..

ಕಿಚ್ಚ ಸುದೀಪ್ ಅವರು ನಡೆಸಿಕೊಡುವ ‘ಬಿಗ್ ಬಾಸ್ ಕನ್ನಡ ಸೀಸನ್ 13’ ಶೋ ಪ್ರಸಾರಕ್ಕೆ ಸಕಲ ಸಿದ್ಧತೆ ನಡೆದಿದೆ. ಈಗಾಗಲೇ ಶೂಟಿಂಗ್ ಕೂಡ ಆರಂಭ ಆಗಿದೆ. ಸೆಪ್ಟೆಂಬರ್ 6ರ ಸಂಜೆ 7 ಗಂಟೆಗೆ ಗ್ರ್ಯಾಂಡ್ ಪ್ರೀಮಿಯರ್ ಸಂಚಿಕೆ ಪ್ರಸಾರ ಆಗಲಿದೆ. ಏಕಕಾಲಕ್ಕೆ ದಕ್ಷಿಣ ಭಾರತದ ನಾಲ್ಕು ಭಾಷೆಗಳಾದ ಮಲಯಾಳಂ, ತಮಿಳು, ಕನ್ನಡ ಮತ್ತು ತೆಲುಗಿನಲ್ಲಿ ಕೂಡ ಬಿಗ್ ಬಾಸ್ ಪ್ರಸಾರ ಶುರುವಾಗುತ್ತಿದೆ. ನಾಲ್ಕೂ ಭಾಷೆಯ ನಿರೂಪಕರು ಒಂದೇ ವೇದಿಕೆಯಲ್ಲಿ ಸೇರಿದ್ದಾರೆ. ಮೋಹನ್​ಲಾಲ್, ವಿಜಯ್ ಸೇತುಪತಿ, ನಾಗಾರ್ಜುನ ಮತ್ತು ಕಿಚ್ಚ ಸುದೀಪ್ ಅವರು ಪರಸ್ಪರ ಮಾತನಾಡಿಕೊಂಡಿದ್ದಾರೆ. ಈ ವೇಳೆ ವಿಜಯ್ ಸೇತುಪತಿ ಅವರು ಕನ್ನಡದಲ್ಲಿ ಮಾತನಾಡಿದ್ದು ವಿಶೇಷವಾಗಿದೆ. ಈ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ. ಈ ಬಾರಿ ಸಾಕಷ್ಟು ವಿಶೇಷತೆಗಳು ಬಿಗ್ ಬಾಸ್ ಶೋನಲ್ಲಿ ಇರಲಿದೆ. ಸೆಲೆಬ್ರಿಟಿಗಳು ಮಾತ್ರವಲ್ಲದೇ ಜನ ಸಾಮಾನ್ಯರಿಗೂ ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಸುವ ಅವಕಾಶ ನೀಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More