ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು

Updated on: Dec 29, 2024 | 4:36 PM

‘ಬಿಗ್ ಬಾಸ್​ ಕನ್ನಡ ಸೀಸನ್​ 11’ ರಿಯಾಲಿಟಿ ಶೋನಲ್ಲಿ ಇನ್ನು ಉಳಿದಿರುವುದು ಕೆಲವೇ ದಿನಗಳು ಮಾತ್ರ. ಫಿನಾಲೆ ಸಮೀಪ ಆದಂತೆಲ್ಲ ಪೈಪೋಟಿಯ ಕಾವು ಜೋರಾಗುತ್ತಿದೆ. ಈಗ ಕೆಲವೇ ಮಂದಿ ಮಾತ್ರ ದೊಡ್ಮನೆಯೊಳಗೆ ಇದ್ದಾರೆ. ಪರಸ್ಪರರ ತಪ್ಪುಗಳನ್ನು ಟೀಕಿಸಲಾಗುತ್ತಿದೆ. ಭಾನುವಾರದ (ಡಿಸೆಂಬರ್​ 29) ಸಂಚಿಕೆಯಲ್ಲಿ ಈ ವಿಷಯ ನಡೆದಿದೆ.

ತಟ್ಟೆಯಲ್ಲಿ ಸ್ಪರ್ಧಿಗಳ ಫೋಟೋ ಇಡಲಾಗಿದೆ. ಆ ಸ್ಪರ್ಧಿಯ ಯಾವ ಗುಣ ಬದಲಾಗಬೇಕು ಎಂದು ಕಮೆಂಟ್​ ಮಾಡಿ, ಸುತ್ತಿಗೆಯಿಂದ ಪ್ಲೇಟ್ ಒಡೆಯಲಾಗಿದೆ. ಗುಣವನ್ನು ಟೀಕಿಸುವಾಗ ಮಾತಿನ ಏಟು ನೀಡಲಾಗಿದೆ. ಆ ಪ್ರೋಮೋ ಇಲ್ಲಿದೆ. ಇನ್ನೇನು ಸ್ವಲ್ಪ ದಿನಗಳಲ್ಲೇ ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಕಾರ್ಯಕ್ರಮದ ಫಿನಾಲೆ ಬರಲಿದೆ. ಯಾರು ಗೆಲ್ಲುತ್ತಾರೆ ಎಂಬುದನ್ನು ತಿಳಿಯುವ ಕೌತುಕ ವೀಕ್ಷಕರಲ್ಲಿ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Dec 29, 2024 04:34 PM
Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More