ಬಿಗ್ ಬಾಸ್ ಮನೆಗೆ ಕಾಲಿಡುತ್ತಲೇ ವಿಶೇಷ ಅಧಿಕಾರ ಪಡೆದ ರಜತ್, ಶೋಭಾ ಶೆಟ್ಟಿ

Updated on: Nov 18, 2024 | 5:26 PM

ವೈಲ್ಡ್​ ಕಾರ್ಡ್ ಮೂಲಕ ರಜತ್ ಮತ್ತು ಶೋಭಾ ಶೆಟ್ಟಿ ಅವರು ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಮೊದಲ ದಿನವೇ ಅವರಿಗೆ ವಿಶೇಷ ಅಧಿಕಾರ ಸಿಕ್ಕಿದೆ. ಅಡುಗೆ ಮನೆಯ ಉಸ್ತುವಾರಿಯಾಗಿ ಅವರಿಬ್ಬರು ನೇಮಕ ಆಗಿದ್ದಾರೆ. ಸ್ಪರ್ಧಿಗಳ ಪೈಕಿ ಯಾರು, ಯಾವ ಅಡುಗೆ ಮಾಡಬೇಕು ಎಂಬುದನ್ನು ಶೋಭಾ ಶೆಟ್ಟಿ ಮತ್ತು ರಜತ್ ಅವರು ನಿರ್ಧಾರ ಮಾಡಿದ್ದಾರೆ.

‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಆಟದಲ್ಲಿ 50 ದಿನ ಕಳೆದ ಬಳಿಕ ವೈಲ್ಡ್​ ಕಾರ್ಡ್ ಮೂಲಕ ರಜತ್ ಮತ್ತು ಶೋಭಾ ಶೆಟ್ಟಿ ಅವರು ದೊಡ್ಮನೆಗೆ ಬಂದಿದ್ದಾರೆ. ಅವರಿಗೆ ಮೊದಲ ದಿನವೇ ವಿಶೇಷ ಅಧಿಕಾರವೊಂದು ಸಿಕ್ಕಿದೆ. ಅವರಿಬ್ಬರು ಅಡುಗೆ ಮನೆಯ ಉಸ್ತುವಾರಿಯಾಗಿ ನೇಮಕ ಆಗಿದ್ದಾರೆ. ಸ್ಪರ್ಧಿಗಳ ಪೈಕಿ ಯಾರು, ಯಾವ ಅಡುಗೆ ಮಾಡಬೇಕು ಎಂಬುದನ್ನು ಶೋಭಾ ಶೆಟ್ಟಿ ಹಾಗೂ ರಜತ್ ಅವರು ನಿರ್ಧರಿಸಿದ್ದಾರೆ. ಇನ್ನೂ ಹೆಚ್ಚಿನ ಅಧಿಕಾರ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಶೋಭಾ ಶೆಟ್ಟಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More