ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ

Updated on: Feb 28, 2025 | 9:41 PM

ತುಂಬಾ ಅದ್ದೂರಿಯಾಗಿ ಹಂಪಿ ಉತ್ಸವ ನಡೆಯುತ್ತಿದೆ. ಇದರಲ್ಲಿ ಹಲವು ಸೆಲೆಬ್ರಿಟಿಗಳು ಭಾಗಿಯಾಗುತ್ತಿದ್ದಾರೆ. ‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಕಾರ್ಯಕ್ರಮದ ವಿಜೇತ ಹನುಮಂತ ಲಮಾಣಿ ಸಹ ಅತಿಥಿಯಾಗಿ ಪಾಲ್ಗೊಂಡಿದ್ದಾರೆ. ವೇದಿಕೆಯಲ್ಲಿ ಅವರು ಮಾತನಾಡಿದ್ದಾರೆ. ಉತ್ತರ ಕರ್ನಾಟಕದ ಹುಲಿಗೆ ಜೈ ಎಂದು ನಿರೂಪಕರು ಜೈಕಾರ ಹಾಕಿದರು. ಆ ವಿಡಿಯೋ ಇಲ್ಲಿದೆ..

ಹಂಪಿ ಉತ್ಸವ ಜೋರಾಗಿ ನಡೆಯುತ್ತಿದೆ. ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿಯಾಗುತ್ತಿದ್ದಾರೆ. ಬಿಗ್ ಬಾಸ್​ ವಿನ್ನರ್ ಹನುಮಂತ (Hanumantha Lamani) ಕೂಡ ಅತಿಥಿಯಾಗಿ ಬಂದಿದ್ದಾರೆ. ವೇದಿಕೆಯಲ್ಲಿ ಅವರು ಮಾತನಾಡಿದ್ದಾರೆ. ಈ ವೇಳೆ ‘ಉತ್ತರ ಕರ್ನಾಟಕದ ಹುಲಿಗೆ ಜೈ’ ಎಂದು ಜೈಕಾರ ಹಾಕಲಾಗಿದೆ. ‘ಎಲ್ಲಿ ಹುಲಿ ಬಿಡೋ ಮಾರಾಯ. ನಿದ್ದಿ ಕೆಟ್ಟು ಇಲಿ ಆಗೇನಿ’ ಎಂದರು ಹನುಮಂತ. ವೋಟ್ ಮಾಡಿ ಬಿಗ್ ಬಾಸ್ ಶೋನಲ್ಲಿ ತಮ್ಮನ್ನು ಗೆಲ್ಲಿಸಿದ ಜನತೆಗೆ ಅವರು ಧನ್ಯವಾದ ತಿಳಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More