ಇವತ್ತು ಫಿನಾಲೆ ಅಲ್ಲ, ಪ್ರೀ ಫಿನಾಲೆ; ಮಾಹಿತಿ ಕೊಟ್ಟ ಕಲರ್ಸ್ ಕನ್ನಡ

Updated on: Jan 17, 2026 | 8:30 AM

Bigg Boss Pre Finale: ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಇಂದು ಫಿನಾಲೆ ನಡೆಯಬೇಕಿತ್ತು. ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ಪ್ರೀ ಫಿನಾಲೆ ಬಗ್ಗೆ ಕಲರ್ಸ್ ಕನ್ನಡ ಮಾಹಿತಿ ನೀಡಿದೆ. ಇಂದು ಪ್ರೀ ಫಿನಾಲೆ ನಡೆಯಲಿದೆ. ಆ ಬಗ್ಗೆ ಇಲ್ಲಿದೆ ವಿವರ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಇಂದು (ಜನವರಿ 17) ಫಿನಾಲೆ ನಡೆಯಬೇಕಿತ್ತು. ಆದರೆ, ಸುದೀಪ್ ಅವರು ಗೈರಾಗಿದ್ದಾರೆ. ಸಿಸಿಎಲ್ ಕಾರಣದಿಂದ ಅವರು ಇಂದು ಆಗಮಿಸೋದು ಅನುಮಾನ ಎನ್ನಲಾಗುತ್ತಿದೆ. ಇಂದು ಪ್ರೀ-ಫಿನಾಲೆ ನಡೆಯಲಿದೆ. ಅದು ಯಾವ ರೀತಿ ಇರುತ್ತದೆ ಎಂಬ ಕುತೂಹಲ ಮೂಡಿದೆ. ಸುದೀಪ್ ಕೂಡ ಇದರ ಭಾಗ ಆಗುತ್ತಾರಾ ಅಥವಾ ಇಲ್ಲವಾ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More