ಬಿಗ್ ಬಾಸ್ ಕನ್ನಡ 13: ಯಶಸ್ ಆಟಕ್ಕೆ ದೊಡ್ಡ ಕಂಟಕವಾದ ಗಗನ್ ಚಿನ್ನಪ್ಪ

Updated on: Nov 23, 2026 | 5:36 PM

ಈ ವಾರ ಗಗನ್ ಚಿನ್ನಪ್ಪ ಅವರು ಕ್ಯಾಪ್ಟನ್ ಆಗಿದ್ದಾರೆ. ಯಶಸ್​ ಅವರನ್ನು ಗಗನ್ ನೇರವಾಗಿ ನಾಮಿನೇಟ್ ಮಾಡಿದ್ದಾರೆ. ಈ ನಾಮಿನೇಷನ್ ಕೇವಲ ಒಂದು ವಾರಕ್ಕೆ ಮಾತ್ರ ಅಲ್ಲ. ಯಶಸ್ ಬಿಗ್ ಬಾಸ್ ಮನೆಯಲ್ಲಿ ಎಲ್ಲಿಯ ತನಕ ಇರುತ್ತಾರೋ ಅಲ್ಲಿಯವರೆಗೂ ಅವರು ನಾನಿಮೇಟ್ ಆಗಿರುತ್ತಾರೆ!

‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋನಲ್ಲಿ ದಿನಗಳು ಕಳೆದಂತೆಲ್ಲ ಪೈಪೋಟಿ ಜೋರಾಗುತ್ತಿದೆ. ಈ ವಾರ ಗಗನ್ ಚಿನ್ನಪ್ಪ ಅವರು ಕ್ಯಾಪ್ಟನ್ ಆಗಿದ್ದಾರೆ. ಯಶಸ್​ ಅವರನ್ನು ಗಗನ್ ನೇರವಾಗಿ ನಾಮಿನೇಟ್ ಮಾಡಿದ್ದಾರೆ. ಈ ನಾಮಿನೇಷನ್ ಕೇವಲ ಒಂದು ವಾರಕ್ಕೆ ಮಾತ್ರ ಅಲ್ಲ. ಯಶಸ್ ಬಿಗ್ ಬಾಸ್ ಮನೆಯಲ್ಲಿ ಎಲ್ಲಿಯ ತನಕ ಇರುತ್ತಾರೋ ಅಲ್ಲಿಯವರೆಗೂ ಅವರು ನಾಮಿನೇಟ್ ಆಗಿರುತ್ತಾರೆ! ಈ ನಿರ್ಧಾರದಿಂದ ಯಶಸ್ ಅವರಿಗೆ ಕೋಪ ಬಂದಿದೆ. ‘ನಾನು ಕಠಿಣ ಸ್ಪರ್ಧಿ ಎಂಬ ಕಾರಣಕ್ಕೆ ನಾಮಿನೇಟ್ ಮಾಡಿದ್ದೀರಾ?’ ಎಂದು ಯಶಸ್ ಪ್ರಶ್ನಿಸಿದ್ದಾರೆ. ‘ಹೌದು, ನಿನ್ನಿಂದ ನನ್ನ ಆಟಕ್ಕೆ ಅಪಾಯ ಇದೆ’ ಎಂದು ಗಗನ್ ಉತ್ತರಿಸಿದ್ದಾರೆ. ಈ ವಿಚಾರಕ್ಕೆ ಅವರಿಬ್ಬರ ನಡುವೆ ಮಾತಿನ ಚಕಮಕಿ ಉಂಟಾಗಿದೆ. ‘ಕಲರ್ಸ್ ಕನ್ನಡ’ ಹಂಚಿಕೊಂಡಿರುವ ನವೆಂಬರ್ 23ರ ಸಂಚಿಕೆಯ ಪ್ರೋಮೋ ಇಲ್ಲಿದೆ…

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More