‘ಬರೀ ಟಾಸ್ಕ್ ಆಡಿದರೆ ಸಾಲದು’: ಧನುಷ್ ಆಟದ ಬಗ್ಗೆ ಲಕ್ಷ್ಮಿ ನೇರ ಮಾತು
ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಮನೆಗೆ ಹೋಗಿದ್ದ ಲಕ್ಷ್ಮಿ ಗೌಡ ಅವರು ಎಲಿಮಿನೇಟ್ ಆಗಿದ್ದಾರೆ. ದೊಡ್ಮನೆಯಿಂದ ಹೊರಗೆ ಬಂದ ಬಳಿಕ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ಮುಂದಿನ ನಡೆ ಏನು ಎಂಬ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈಗ ಅವರು ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ.
ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಮನೆಗೆ ಹೋಗಿದ್ದ ಲಕ್ಷ್ಮಿ ಗೌಡ ಅವರು ಎಲಿಮಿನೇಟ್ ಆಗಿದ್ದಾರೆ. ದೊಡ್ಮನೆಯಿಂದ ಹೊರಗೆ ಬಂದ ಬಳಿಕ ಅವರು ಟಿವಿ9 ಜೊತೆ ಮಾತನಾಡಿದ್ದಾರೆ. ತಮ್ಮ ಮುಂದಿನ ನಡೆ ಏನು ಎಂಬ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈಗ ಅವರು ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಬಣ್ಣದ ಲೋಕದಲ್ಲಿ ಒಳ್ಳೆಯ ಅವಕಾಶಗಳು ಸಿಕ್ಕರೆ ಐಟಿ ಕ್ಷೇತ್ರವನ್ನು ಬಿಟ್ಟು ಸಂಪೂರ್ಣವಾಗಿ ನಟನೆಯಲ್ಲಿ ತೊಡಗಿಕೊಳ್ಳುವುದಾಗಿ ಅವರು ಹೇಳಿದ್ದಾರೆ. ಸದ್ಯ ಬಿಗ್ ಬಾಸ್ ಮನೆಯಲ್ಲಿ ಕಾಮನರ್ ಸ್ಪರ್ಧಿಯಾಗಿ ಇರುವ ಧನುಷ್ ಅವರ ಆಟ ಹೇಗಿದೆ ಎಂಬುದನ್ನು ಲಕ್ಷ್ಮಿ ಗೌಡ ಅವರು ವಿಶ್ಲೇಷಿಸಿದ್ದಾರೆ. ಧನುಷ್ ಅವರು ಕೇವಲ ಟಾಸ್ಕ್ ಆಡುವುದರಲ್ಲಿ ಮುಂದಿದ್ದಾರೆ. ಆದರೆ ಮನರಂಜನೆ ನೀಡುವಲ್ಲಿ ಅವರು ಹಿಂದುಳಿದಿದ್ದಾರೆ. ಹಾಗಿದ್ದರೆ ಬಿಗ್ ಬಾಸ್ ಮನೆಯಲ್ಲಿ ಉಪಯೋಗ ಆಗಲ್ಲ ಎಂದು ಲಕ್ಷ್ಮಿ ಗೌಡ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
