ಬಿಗ್ ಬಾಸ್ ಮನೆಯಲ್ಲಿ ಮಗಳ ಧ್ವನಿ ಕೇಳಿ ಕಣ್ಣೀರು ಹಾಕಿದ ಜಗದೀಶ್

Updated on: Nov 04, 2026 | 4:04 PM

‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋನಲ್ಲಿ ಈ ವಾರ ಸ್ಪರ್ಧಿಗಳಿಗೆ ಕುಟುಂಬದವರ ಪತ್ರ ಓದುವ ಅವಕಾಶ ನೀಡಲಾಗುತ್ತಿದೆ. ಆದರೆ ಅದು ಸುಲಭವಿಲ್ಲ. ಟಾಸ್ಕ್ ಗೆಲ್ಲುವ ಸ್ಪರ್ಧಿಗಳಿಗೆ ಮಾತ್ರ ಪತ್ರ ಸಿಗುತ್ತದೆ. ಹಾಗಾಗಿ ತಮ್ಮ ಮನೆಯವರ ಪತ್ರವನ್ನು ಓದುವಾಗ ಎಲ್ಲರೂ ಎಮೋಷನಲ್ ಆಗುತ್ತಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋನಲ್ಲಿ ಈ ವಾರ ಸ್ಪರ್ಧಿಗಳಿಗೆ ಕುಟುಂಬದವರ ಪತ್ರ ಓದುವ ಅವಕಾಶ ನೀಡಲಾಗುತ್ತಿದೆ. ಆದರೆ ಅದು ಸುಲಭವಿಲ್ಲ. ಟಾಸ್ಕ್ ಗೆಲ್ಲುವ ಸ್ಪರ್ಧಿಗಳಿಗೆ ಮಾತ್ರ ಪತ್ರ ಸಿಗುತ್ತದೆ. ಹಾಗಾಗಿ ತಮ್ಮ ಮನೆಯವರ ಪತ್ರವನ್ನು ಓದುವಾಗ ಎಲ್ಲರೂ ಎಮೋಷನಲ್ ಆಗುತ್ತಿದ್ದಾರೆ. ಜಗದೀಶ್ ಅವರು ಬಿಗ್ ಬಾಸ್ ಮನೆಯಲ್ಲಿ ಅನೇಕ ಬಾರಿ ತಮ್ಮ ಮಗಳ ಬಗ್ಗೆ ಪ್ರಸ್ತಾಪಿಸಿದ್ದುಂಟು. ಈಗ ಮಗಳಿಂದಲೇ ಅವರಿಗೆ ಪತ್ರ ಬಂದಿದೆ. ಅಲ್ಲದೇ, ವಾಯ್ಸ್ ನೋಟ್ ಕೂಡ ಕಳಿಸಲಾಗಿದೆ. ಅದನ್ನು ಕೇಳಿಸಿಕೊಂಡು ಜಗದೀಶ್ ಅವರು ಕಣ್ಣೀರು ಹಾಕಿದ್ದಾರೆ. ನವೆಂಬರ್ 4ರ ಸಂಚಿಕೆಯ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ. ಮನೆಯವರ ಪತ್ರ ಪಡೆದ ಬಳಿಕ ಸ್ಪರ್ಧಿಗಳ ಹುಮ್ಮಸ್ಸು ಇನ್ನಷ್ಟು ಹೆಚ್ಚಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More