ಬಿಗ್ ಬಾಸ್: ಶಾಸ್ತ್ರಿ ಕುತಂತ್ರದ ವಿರುದ್ಧ ತಿರುಗಿ ಬಿದ್ದ ತಾಂಡವ್ ರಾಮ್, ಗಾನವಿ

Updated on: Nov 03, 2026 | 4:05 PM

‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋನಲ್ಲಿ ಕಿರಣ್ ಶಾಸ್ತ್ರಿ ಆಟದ ಬಗ್ಗೆ ಹಲವರಿಗೆ ತಕರಾರು ಇದೆ. ಈಗಾಗಲೇ ಅನೇಕ ಸ್ಪರ್ಧಿಗಳು ಅಸಮಾಧಾನ ವ್ಯಕ್ತಪಡಿಸಿದ್ದುಂಟು. ಹೊಸ ಸಂಚಿಕೆಯಲ್ಲಿ ಗಾನವಿ ಮತ್ತು ತಾಂಡವ್ ರಾಮ್ ಕೂಡ ಕಿರಣ್ ಶಾಸ್ತ್ರಿ ವಿರುದ್ಧ ತಿರುಗಿ ಬಿದ್ದಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋನಲ್ಲಿ ಕಿರಣ್ ಶಾಸ್ತ್ರಿ ಆಟದ ಬಗ್ಗೆ ಹಲವರಿಗೆ ತಕರಾರು ಇದೆ. ಈಗಾಗಲೇ ಅನೇಕ ಸ್ಪರ್ಧಿಗಳು ಅಸಮಾಧಾನ ವ್ಯಕ್ತಪಡಿಸಿದ್ದುಂಟು. ಹೊಸ ಸಂಚಿಕೆಯಲ್ಲಿ ಗಾನವಿ ಮತ್ತು ತಾಂಡವ್ ರಾಮ್ ಕೂಡ ಕಿರಣ್ ಶಾಸ್ತ್ರಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ‘ಕುತಂತ್ರ ಮಾಡುವ ನಿನಗೇ ಇಷ್ಟು ಇರಬೇಕಾದರೆ ನ್ಯಾಯವಾಗಿ ಬದುಕುವ ನಮಗೆ ಇಷ್ಟು ಇರಬೇಕು’ ಎಂದು ತಾಂಡವ್ ರಾಮ್ ಅವರು ಗರಂ ಆಗಿ ಹೇಳಿದ್ದಾರೆ. ಅದಕ್ಕೆ ಪ್ರತ್ಯುತ್ತರ ನೀಡಿ ಉದ್ಧಟತನ ತೋರಲು ಕಿರಣ್ ಶಾಸ್ತ್ರಿ ಪ್ರಯತ್ನಿಸಿದ್ದಾರೆ. ಅದರಿಂದ ತಾಂಡವ್ ರಾಮ್ ಅವರಿಗೆ ಸಖತ್ ಕೋಪ ಬಂದಿದೆ. ‘ಕಳ್ಳ ನೀನು.. ಎದೆ ಮೇಲೆ ಕಾಲಿಟ್ಟುಬಿಡುತ್ತೇನೆ’ ಎಂದು ಅವರು ಗುಡುಗಿದ್ದಾರೆ. ಅವರನ್ನು ಜಗದೀಶ್ ತಡೆದಿದ್ದಾರೆ. ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿರುವ ನವೆಂಬರ್ 3ರ ಸಂಚಿಕೆಯ ಪ್ರೋಮೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More