AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ವಿರುದ್ಧ ತಿರುಬಿದ್ದ ವೈಲ್ಡ್​ ಕಾರ್ಡ್ ಸ್ಪರ್ಧಿಗಳು

ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ವಿರುದ್ಧ ತಿರುಬಿದ್ದ ವೈಲ್ಡ್​ ಕಾರ್ಡ್ ಸ್ಪರ್ಧಿಗಳು

ರಾಜೇಶ್ ದುಗ್ಗುಮನೆ
|

Updated on:Sep 29, 2026 | 8:33 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 13’ ಒಂದು ತಿಂಗಳು ಪೂರ್ಣಗೊಳಿಸುತ್ತಾ ಬಂದಿದೆ. ಈ ಸಂದರ್ಭದಲ್ಲಿ ವೈಲ್ಡ್ ಕಾರ್ಡ್ ಸ್ಪರ್ಧಿಗಳ ಎಂಟ್ರಿ ಆಗಿದೆ. ಗಗನಾ ಅವರು ಕಿರಣ್ ಶಾಸ್ತ್ರಿಯನ್ನು ನಾಮಿನೇಟ್ ಮಾಡಿದ್ದಾರೆ. ಅದೇ ರೀತಿ ಪ್ರಶಾಂತ್ ಕೂಡ ಅವರನ್ನೇ ನಾಮಿನೇಟ್ ಮಾಡಿದ್ದಾರೆ. ಈ ನಾಮಿನೇಷನ್ ಸಾಕಷ್ಟು ಖಡಕ್ ಆಗಿತ್ತು. ಈ ಬಗ್ಗೆ ಚರ್ಚೆಗಳು ಜೋರಾಗಿವೆ.

‘ಬಿಗ್ ಬಾಸ್ ಕನ್ನಡ ಸೀಸನ್ 13’ರಲ್ಲಿ ಈ ವಾರ ನಾಮಿನೇಷನ್ ಕಾವು ಜೋರಾಗಿದೆ. ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟಿರೋ ಗಗನಾ, ಪ್ರಶಾಂತ್ ಅವರು ಕಿರಣ್ ಶಾಸ್ತ್ರಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇವರಿಬ್ಬರೂ ನಾಮಿನೇಷನ್ ವೇಳೆ ಕಿರಣ್ ಹೆಸರನ್ನು ತೆಗೆದುಕೊಂಡಿದ್ದಾರೆ. ‘ಅಸಹ್ಯದಲ್ಲೇ ಅಸಹ್ಯ ನೀನು. ಅದಕ್ಕಾಗಿ ನಿನ್ನೆ ಹೆಸರನ್ನು ತೆಗೆದುಕೊಂಡಿದ್ದೇನೆ’ ಎಂದು ಕಿರಣ್ ಶಾಸ್ತ್ರಿ ವಿರುದ್ಧ ಗಗನಾ ತಿರುಗಿಬಿದ್ದಿದ್ದಾರೆ. ಈ ವಾರ ಯಾರು ನಾಮಿನೇಟ್ ಆಗುತ್ತಾರೆ, ಯಾರು ಹೊರ ಹೋಗುತ್ತಾರೆ ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Sep 29, 2026 08:31 AM

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More