ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್ ಕನ್ನಡ

Updated on: Jun 19, 2026 | 8:26 AM

ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ 'ಬಿಗ್ ಬಾಸ್ ಕನ್ನಡ'ದ ಹೊಸ ಸೀಸನ್‌ನ ಆಡಿಷನ್‌ ಪ್ರಕ್ರಿಯೆ ಚುರುಕಿನಿಂದ ಸಾಗುತ್ತಿದ್ದು, ಇದೀಗ ವಾಹಿನಿಯು ಬಿಗ್ ಬಾಸ್ ಕಾಂಪಿಟೇಷನ್ ವಿಡಿಯೋ ಕಳುಹಿಸಲು ಕೊನೆಯ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿ ಸಾಮಾನ್ಯ ಜನರಿಗೂ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲು ಸುವರ್ಣ ಅವಕಾಶ ನೀಡಲಾಗಿದ್ದು, ಆಡಿಷನ್ ವಿಡಿಯೋಗಳನ್ನು ಅಪ್‌ಲೋಡ್ ಮಾಡಲು ಜೂನ್ 21 ಅಂತಿಮ ದಿನಾಂಕವಾಗಿದೆ.

ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ’ದ ಹೊಸ ಸೀಸನ್‌ನ ಆಡಿಷನ್‌ ಪ್ರಕ್ರಿಯೆ ನಡೆಯುತ್ತಿದೆ. ಈಗ ವಾಹಿನಿಯು ಬಿಗ್ ಬಾಸ್ ಕಾಂಪಿಟೇಷನ್ ವಿಡಿಯೋ ಕಳುಹಿಸಲು ಕೊನೆಯ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿ ಸಾಮಾನ್ಯ ಜನರಿಗೂ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲು ಸುವರ್ಣ ಅವಕಾಶ ನೀಡಲಾಗಿದ್ದು, ಆಡಿಷನ್ ವಿಡಿಯೋಗಳನ್ನು ಅಪ್‌ಲೋಡ್ ಮಾಡಲು ಜೂನ್ 21 ಅಂತಿಮ ದಿನಾಂಕವಾಗಿದೆ.

‘ಇಷ್ಟು ದಿನ ಕೈತಟ್ಟಿ ಪ್ರೋತ್ಸಾಹ ನೀಡಿದ್ದು ಸಾಕು, ಈ ಬಾರಿ ನೀವೇ ಅಖಾಡಕ್ಕೆ ಇಳಿಯುವ ಸಮಯ ಬಂದಿದೆ’ ಎಂದು ವೀಕ್ಷಕರಿಗೆ ಬಿಗ್ ಬಾಸ್ ಮನೆಗೆ ಮುಕ್ತ ಆಹ್ವಾನ ನೀಡಲಾಗಿದೆ. ಬಿಗ್ ಬಾಸ್ ಮನೆಗೆ ಸ್ಪರ್ಧಿಯಾಗಿ ಹೋಗಲು ಆಸೆ ಇರುವವರು ಮತ್ತು ತಮ್ಮಲ್ಲಿನ ವಿಶಿಷ್ಟ ಪ್ರತಿಭೆಯನ್ನು ಜಗತ್ತಿಗೆ ತೋರಿಸಲು ಬಯಸುವ ಸಾಮಾನ್ಯ ಜನರು ತಮ್ಮದೊಂದು ಉತ್ತಮ ಆಡಿಷನ್ ವಿಡಿಯೋವನ್ನು ಸಿದ್ಧಪಡಿಸಿಕೊಳ್ಳಬೇಕು. ಆ ವಿಡಿಯೋವನ್ನು colorskannada.jiostar.com ಎಂಬ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಪ್‌ಲೋಡ್ ಮಾಡಬೇಕಾಗುತ್ತದೆ. (Source: Colors Kannada Instagram)

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More