‘ಭಾಗ್ಯಶ್ರೀ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ’; ಪತಿ ಭರತ್ ಬೇಸರ

Updated on: Oct 27, 2023 | 9:15 AM

ಭಾಗ್ಯಶ್ರೀ ಟಾರ್ಗೆಟ್ ಆಗುತ್ತಿದ್ದಾರೆ ಅನಿಸುತ್ತಿದೆ. ಎರಡು ಕಾರಣಕ್ಕೆ ಟಾರ್ಗೆಟ್ ಮಾಡಲಾಗುತ್ತದೆ. ಸ್ಟ್ರಾಂಗ್ ಎನ್ನುವ ಕಾರಣಕ್ಕೆ ಹೊರಗಿಡಬಹುದು ಅಥವಾ ನಮ್ಮ ಜೊತೆ ಬೆರೆಯುತ್ತಿಲ್ಲ ಎನ್ನುವ ಕಾರಣಕ್ಕೆ ಹೊರಗೆ ಇಡಬಹುದು. ಇವರು ಯಾವ ಕಾರಣಕ್ಕೆ ಹೊರಗಿಟ್ಟಿದ್ದಾರೆ ಅನ್ನೋದು ಗೊತ್ತಿಲ್ಲ. ಆದರೆ, ಅವರು ಸ್ಟ್ರಾಂಗ್ ಆಗಿದ್ದಾರೆ’ ಎಂದಿದ್ದಾರೆ ಭಾಗ್ಯಶ್ರೀ ಪತಿ ಭರತ್.

ಧಾರಾವಾಹಿ ನಟಿ ಭಾಗ್ಯಶ್ರೀ ಅವರು ಬಿಗ್ ಬಾಸ್ ಮನೆಯಲ್ಲಿ ಗಮನ ಸೆಳೆಯುತ್ತಿದ್ದಾರೆ. ಅವರ ಪತಿ, ನಿರ್ದೇಶಕ ಭರತ್ ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ. ‘ಭಾಗ್ಯಶ್ರೀ (Bhagyashree) ಟಾರ್ಗೆಟ್ ಆಗುತ್ತಿದ್ದಾರೆ ಅನಿಸುತ್ತಿದೆ. ಎರಡು ಕಾರಣಕ್ಕೆ ಟಾರ್ಗೆಟ್ ಮಾಡಲಾಗುತ್ತದೆ. ಸ್ಟ್ರಾಂಗ್ ಎನ್ನುವ ಕಾರಣಕ್ಕೆ ಹೊರಗಿಡಬಹುದು ಅಥವಾ ನಮ್ಮ ಜೊತೆ ಬೆರೆಯುತ್ತಿಲ್ಲ ಎನ್ನುವ ಕಾರಣಕ್ಕೆ ಹೊರಗೆ ಇಡಬಹುದು. ಇವರು ಯಾವ ಕಾರಣಕ್ಕೆ ಹೊರಗಿಟ್ಟಿದ್ದಾರೆ ಅನ್ನೋದು ಗೊತ್ತಿಲ್ಲ. ಆದರೆ, ಅವರು ಸ್ಟ್ರಾಂಗ್ ಆಗಿದ್ದಾರೆ’ ಎಂದಿದ್ದಾರೆ ಭಾಗ್ಯಶ್ರೀ ಪತಿ. ಬಿಗ್ ಬಾಸ್ ಎಪಿಸೋಡ್ ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More