ಜಗಳಗಳೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು

Updated on: Oct 16, 2024 | 6:49 PM

ಬಿಗ್​ಬಾಸ್ ಕನ್ನಡ ಸೀಸನ್ 11 ಪ್ರಾರಂಭ ಆದಾಗಿನಿಂದಲೂ ಮನೆಯಲ್ಲಿ ಬರೀ ಜಗಳವೇ ತುಂಬಿಕೊಂಡಿದೆ. ಜಗಳ ಮಾಡಿಕೊಂಡು ಲಾಯರ್ ಜಗದೀಶ್ ಹೊರಗೆ ಬಂದಿದ್ದಾರೆ ಎನ್ನಲಾಗುತ್ತಿದೆ. ಇದರ ನಡುವೆ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು ಕೇಳಿ ಬಂದಿದೆ.

ಬಿಗ್​ಬಾಸ್ ಕನ್ನಡ ಸೀಸನ್ 11 ಪ್ರಾರಂಭ ಆದಾಗಿನಿಂದಲೂ ಮನೆಯಲ್ಲಿ ಜಗಳವೇ ತುಂಬಿದೆ. ಹಾಸ್ಯಕ್ಕಂತೂ ಜಾಗವೇ ಇಲ್ಲದಾಗಿದೆ. ಹಾಸ್ಯದ ಸನ್ನಿವೇಶಗಳು ಸೃಷ್ಟಿಯಾದರೂ ಸಹ ಅದು ಮುಜುಗರ ತರುವಂಥಹಾ ಹಾಸ್ಯವೇ ಆಗಿರುತ್ತಿತ್ತು. ಇದೀಗ ನಿನ್ನೆ ನಡೆದ ಮಾರಾ-ಮಾರಿ ಜಗಳದಲ್ಲಿ ಇಬ್ಬರು ಸ್ಪರ್ಧಿಗಳು ಮನೆಯಿಂದ ಹೊರಗೆ ಹೋಗಿದ್ದಾರೆ ಎನ್ನಲಾಗುತ್ತಿದೆ. ಜಗದೀಶ್ ಹಾಗೂ ರಂಜಿತ್ ಪರಸ್ಪರ ಕೈ-ಕೈ ಮಿಲಾಯಿಸಿಕೊಂಡಿದ್ದಾರೆ ಎನ್ನಲಾಗುತ್ತಿದ್ದು ಇಬ್ಬರೂ ಮನೆಯಿಂದ ಹೊರಗೆ ಹೋಗಿದ್ದಾರೆ ಎನ್ನಲಾಗುತ್ತಿದೆ. ಇದರ ನಡುವೆ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು ಕೇಳಿಸಿದೆ. ಆದರೆ ಯಾರ ಮಗುವಿನ ಅಳು? ಯಾರಿಗೆ ಕೇಳಿಸಿದೆ? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 16, 2024 04:57 PM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More