AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್: ನಾಮಿನೇಟ್ ಆದವರಲ್ಲಿ ಈ ವಾರ ಮನೆಯಿಂದ ಹೊರಹೋಗುವವರು ಯಾರು?

ಬಿಗ್ ಬಾಸ್: ನಾಮಿನೇಟ್ ಆದವರಲ್ಲಿ ಈ ವಾರ ಮನೆಯಿಂದ ಹೊರಹೋಗುವವರು ಯಾರು?

ರಾಜೇಶ್ ದುಗ್ಗುಮನೆ
|

Updated on: Oct 24, 2026 | 8:36 AM

Share

ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ಈ ವಾರದ ಎಲಿಮಿನೇಷನ್ ಪ್ರಕ್ರಿಯೆ ಕುತೂಹಲ ಮೂಡಿಸಿದೆ. ನಾಮಿನೇಟ್ ಆಗಿರುವ ಸ್ಪರ್ಧಿಗಳ ಪೈಕಿ ವೀಕ್ಷಕರ ಮತಗಳ ಆಧಾರದ ಮೇಲೆ ಈ ವಾರ ಮನೆಯಿಂದ ಹೊರಹೋಗುವ ಸ್ಪರ್ಧಿ ಯಾರು ಎಂಬುದು ಇಂದಿನ ಸಂಚಿಕೆಯಲ್ಲಿ ತಿಳಿಯಲಿದೆ. ಕಿಚ್ಚ ಸುದೀಪ್ ಅವರ ಸಮ್ಮುಖದಲ್ಲಿ ಈ ವಾರದ ಅಚ್ಚರಿಯ ನಿರ್ಧಾರ ಹೊರಬರಲಿದೆ.

ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ರೋಚಕ ಹಂತ ತಲುಪಿದೆ. ವಾರದ ಅಂತಿಮ ಘಟ್ಟದಲ್ಲಿ ಸ್ಪರ್ಧಿಗಳ ಅದೃಷ್ಟ ನಿರ್ಧಾರವಾಗುವ ಸಮಯ ಹತ್ತಿರ ಬಂದಿದೆ. ಕಿಚ್ಚನ ಪಂಚಾಯ್ತಿಗೆ ಎಲ್ಲರೂ ಕಾಯುತ್ತಿದ್ದಾರೆ. ಈ ವಾರ ಮನೆಯಲ್ಲಿ ಡೈಮಂಡ್ ಕದಿಯೋ ಟಾಸ್ಕ್ ನಡೆದಿದೆ. ಈ ವಾರ ಆಸಿಯಾ, ಕುಮಾರಿ, ಲಕ್ಷ್ಮೀ, ಸೋನಿಕಾ, ಸೌಂದರ್ಯಾ, ತಾಂಡವ್ ರಾಮ್ ನಾಮಿನೇಟ್ ಆಗಿದ್ದಾರೆ. ಈ ಪೈಕಿ ಈ ವಾರ ಯಾರು ಮನೆಯಿಂದ ಹೊರಹೋಗಲಿದ್ದಾರೆ ಎಂಬ ಪ್ರಶ್ನೆ ಮೂಡಿದೆ. ವೀಕ್ಷಕರ ವೋಟಿಂಗ್ ಹಾಗೂ ಅವರ ವಾರದ ಪ್ರದರ್ಶನದ ಆಧಾರದ ಮೇಲೆ ಒಬ್ಬ ಸ್ಪರ್ಧಿ ದೊಡ್ಮನೆಯಿಂದ ಹೊರಬರಬೇಕಾಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More