ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ

Updated on: May 02, 2025 | 10:49 PM

‘ಬಿಗ್ ಬಾಸ್ ಕನ್ನಡ’ ಸ್ಪರ್ಧಿ ಚೈತ್ರಾ ಕುಂದಾಪುರ ಹಾಗೂ ಅವರ ತಾಯಿಯನ್ನು ಒಂದೇ ವೇದಿಕೆಯಲ್ಲಿ ಸನ್ಮಾನಿಸಲಾಗಿದೆ. ಈ ಸಂದರ್ಭದ ವಿಡಿಯೋ ಇಲ್ಲಿದೆ. ಇದು ಚೈತ್ರಾ ಕುಂದಾಪುರ ಅವರ ಪಾಲಿಗೆ ವಿಶೇಷ ಕ್ಷಣ. ಆ ಬಗ್ಗೆ ಚೈತ್ರಾ ಕುಂದಾಪುರ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

‘ಬಿಗ್ ಬಾಸ್ ಕನ್ನಡ’ (Bigg Boss Kannada) ರಿಯಾಲಿಟಿ ಶೋ ಮಾಜಿ ಸ್ಪರ್ಧಿ ಚೈತ್ರಾ ಕುಂದಾಪುರ (Chaithra Kundapura) ಮತ್ತು ಅವರ ತಾಯಿಯನ್ನು ವೇದಿಕೆಯಲ್ಲಿ ಒಟ್ಟಿಗೆ ಸನ್ಮಾನಿಸಲಾಗಿದೆ. ಈ ಸಂದರ್ಭದ ವಿಡಿಯೋವನ್ನು ಚೈತ್ರಾ ಅವರು ಹಂಚಿಕೊಂಡಿದ್ದಾರೆ. ತಾಯಿ (Chaithra Kundapura Mother) ಜೊತೆ ಸನ್ಮಾನ ಪಡೆದಿದ್ದು ಚೈತ್ರಾ ಕುಂದಾಪುರ ಪಾಲಿಗೆ ಹೆಮ್ಮೆಯ ಕ್ಷಣ. ಆ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ‘ಅಮ್ಮನ ತವರೂರಲ್ಲಿ ನಡೆದ ಮೊದಲ ಕಾರ್ಯಕ್ರಮ. ಅಮ್ಮನೊಂದಿಗಿನ ಈ ಸನ್ಮಾನ ಸಾವಿರ ಸನ್ಮಾನಗಳ ತೂಕಕ್ಕೂ ಮಿಗಿಲು. ನೀಲಾವರ ಎಂದರೆ ನನ್ನ ಪಾಲಿಗೆ ಕೇವಲ ಊರಲ್ಲ, ನನ್ನ ಬಾಲ್ಯದ ನೆನಪುಗಳ ಕಣಜ’ ಎಂದು ಅವರು ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More