ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿದ್ರೆ ಎಲ್ಲ ಗೊತ್ತಾಗತ್ತೆ: ವಿನಯ್ ಗೌಡ
‘ಬಲರಾಮನ ದಿನಗಳು’ ಸಿನಿಮಾದಲ್ಲಿ ವಿನಯ್ ಗೌಡ ಅವರು ನಟಿಸಿದ್ದಾರೆ. ಈ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ‘ಟಾಕ್ಸಿಕ್’ ಚಿತ್ರದ ಟೀಸರ್ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ಟಾಕ್ಸಿಕ್ ಚಿತ್ರತಂಡಕ್ಕೆ ನಾವು ಸಪೋರ್ಟ್ ಮಾಡಬೇಕು. ನಮ್ಮವರೇ ಅದನ್ನು ಹಾಳು ಮಾಡಬಾರದು’ ಎಂದಿದ್ದಾರೆ ವಿನಯ್.
‘ಬಲರಾಮನ ದಿನಗಳು’ ಸಿನಿಮಾದಲ್ಲಿ ವಿನಯ್ ಗೌಡ ಅವರು ನಟಿಸಿದ್ದಾರೆ. ಈ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ‘ಟಾಕ್ಸಿಕ್’ (Toxic Teaser) ಚಿತ್ರದ ಟೀಸರ್ ಬಗ್ಗೆಯೂ ಅವರು ಮಾತನಾಡಿದ್ದಾರೆ. ‘ಟಾಕ್ಸಿಕ್ ಟೀಸರ್ ಅಮೇಜಿಂಗ್ ಆಗಿದೆ. ಹಾಲಿವುಡ್ ಮಟ್ಟಕ್ಕೆ ನಮ್ಮ ಕನ್ನಡ ಸಿನಿಮಾ ಆಗುತ್ತಿದೆ. ಅದರ ಬಗ್ಗೆ ನಮಗೆ ಹೆಮ್ಮೆ ಇರಬೇಕು. ಅದನ್ನು ಗೇಲಿ ಮಾಡಬಾರದು. ಈಗ ಮಾತನಾಡೋರೆಲ್ಲ ಏನೂ ಮಾಡೇ ಇಲ್ಲವಾ? ಆ ರೀತಿಯದ್ದು ಏನೂ ನೋಡೇ ಇಲ್ಲವಾ? ಹೋಗಿ ಅವರ ಮೊಬೈಲ್ನಲ್ಲಿ ಗೂಗಲ್ ಸರ್ಚ್ ಹಿಸ್ಟರಿ ತೆಗೆದು ನೋಡಿದರೆ ಎಲ್ಲವೂ ಗೊತ್ತಾಗುತ್ತದೆ. ಟಾಕ್ಸಿಕ್ ಚಿತ್ರತಂಡಕ್ಕೆ ನಾವು ಸಪೋರ್ಟ್ ಮಾಡಬೇಕು. ನಮ್ಮ ಕನ್ನಡ ಚಿತ್ರರಂಗವನ್ನು ಅವರು ಹಾಲಿವುಡ್ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ. ನಮ್ಮವರೇ ಅದನ್ನು ಹಾಳು ಮಾಡಬಾರದು’ ಎಂದು ವಿನಯ್ ಗೌಡ (Vinay Gowda) ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
