ಮದುವೆ ಫೋಟೋ ಹಂಚಿಕೊಂಡು ಕಮೆಂಟ್ ಆಯ್ಕೆ ಆಫ್ ಮಾಡಿದ ದೀಪಿಕಾ ದಾಸ್

Updated on: Mar 02, 2024 | 7:31 AM

ದೀಪಿಕಾ ಅವರು ಸದ್ದಿಲ್ಲದೆ ಮದುವೆ ಆಗುತ್ತಾರೆ ಎಂದು ಫ್ಯಾನ್ಸ್ ಊಹಿಸಿರಲಿಲ್ಲ. ಈ ವಿಚಾರದ ಬಗ್ಗೆ ಅನೇಕರು ಶಾಕ್ ವ್ಯಕ್ತಪಡಿಸಿದ್ದಾರೆ. ಈ ರೀತಿ ಆದಾಗ ಬೇರೆ ಬೇರೆ ರೀತಿಯಲ್ಲಿ ಪ್ರತಿಕ್ರಿಯೆ ಬರುತ್ತದೆ. ಹಾಗಾಗಬಾರದು ಎನ್ನುವ ಕಾರಣದಿಂದಲೇ ದೀಪಿಕಾ ದಾಸ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಕಮೆಂಟ್ ಆಯ್ಕೆಯನ್ನೇ ಆಫ್ ಮಾಡಿದ್ದಾರೆ.

ನಟಿ ದೀಪಿಕಾ ದಾಸ್ (Deepika Das) ಅವರು ಸೈಲೆಂಟ್ ಆಗಿ ವಿವಾಹ ಆಗಿದ್ದಾರೆ. ಈ ಫೋಟೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಅವರ ಮದುವೆ ವಿಚಾರ ಅನೇಕರಿಗೆ ಅಚ್ಚರಿ ತಂದಿದೆ. ದೀಪಿಕಾ ಅವರು ಸದ್ದಿಲ್ಲದೆ ಮದುವೆ ಆಗುತ್ತಾರೆ ಎಂದು ಫ್ಯಾನ್ಸ್ ಊಹಿಸಿರಲಿಲ್ಲ. ಈ ವಿಚಾರದ ಬಗ್ಗೆ ಅನೇಕರು ಶಾಕ್ ವ್ಯಕ್ತಪಡಿಸಿದ್ದಾರೆ. ಈ ರೀತಿ ಆದಾಗ ಬೇರೆ ಬೇರೆ ರೀತಿಯಲ್ಲಿ ಪ್ರತಿಕ್ರಿಯೆ ಬರುತ್ತದೆ. ಹಾಗಾಗಬಾರದು ಎನ್ನುವ ಕಾರಣದಿಂದಲೇ ದೀಪಿಕಾ ದಾಸ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಕಮೆಂಟ್ ಆಯ್ಕೆಯನ್ನೇ ಆಫ್ ಮಾಡಿದ್ದಾರೆ. ದೀಪಿಕಾ ದಾಸ್ ಮದುವೆ ನಡೆದಿದ್ದು ಗೋವಾದಲ್ಲಿ. ದುಬೈನಲ್ಲಿ ನೆಲೆಸಿರುವ ಕರ್ನಾಟಕ ಮೂಲದ ಉದ್ಯಮಿಯನ್ನು ಅವರು ವರಿಸಿದ್ದಾರೆ. ‘ನಾಗಿಣಿ’ ಧಾರಾವಾಹಿಯಲ್ಲಿ ದೀಪಿಕಾ ನಟಿಸಿದ್ದರು. ‘ಬಿಗ್ ಬಾಸ್’ನಲ್ಲೂ ಸ್ಪರ್ಧಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More