ಬಿಗ್ ಬಾಸ್ ರಂಜಿತ್ ಮನೆಯ ಜಗಳ: ಎಲ್ಲವನ್ನೂ ಎಳೆಎಳೆಯಾಗಿ ವಿವರಿಸಿದ ಅಕ್ಕ ರಶ್ಮಿ

Updated on: Sep 19, 2025 | 7:23 PM

ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಮಾಜಿ ಸ್ಪರ್ಧಿ ರಂಜಿತ್ ಅವರ ಫ್ಯಾಮಿಲಿಯ ಜಗಳ ಬೀದಿಗೆ ಬಂದಿದೆ. ಮನೆಯ ಒಡೆತನಕ್ಕೆ ಸಂಬಂಧಿಸಿದಂತೆ ರಂಜಿತ್ ಮತ್ತು ಅವರ ಅಕ್ಕನ ನಡುವೆ ಜಗಳ ಆಗಿದೆ. ಕುಟುಂಬದ ಸದಸ್ಯರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದಾರೆ. ತಮ್ಮ ಮೇಲೆ ಹಲ್ಲೆ ಆಗಿದೆ ಎಂದು ರಶ್ಮಿ ಹೇಳಿದ್ದಾರೆ.

ಬಿಗ್ ಬಾಸ್ ಸ್ಪರ್ಧಿ ರಂಜಿತ್ (Bigg Boss Ranjith) ಅವರ ಕುಟುಂಬದ ಜಗಳ ಬೀದಿಗೆ ಬಂದಿದೆ. ಮನೆಯ ಒಡೆತನಕ್ಕೆ ಸಂಬಂಧಿಸಿದಂತೆ ರಂಜಿತ್ ಹಾಗೂ ಅವರ ಅಕ್ಕ ರಶ್ಮಿ ನಡುವೆ ಕಿರಿಕ್ ಆಗಿದೆ. ಕುಟುಂಬದ ಸದಸ್ಯರು ಪರಸ್ಪರ ಆರೋಪ ಮಾಡಿಕೊಳ್ಳುತ್ತಿದ್ದಾರೆ. ತಮ್ಮ ಮೇಲೆ ಹಲ್ಲೆ ಆಗಿದೆ ಎಂದು ರಶ್ಮಿ ಹೇಳುತ್ತಿದ್ದಾರೆ. ಜಗಳದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಅಷ್ಟಕ್ಕೂ ಈ ಜಗಳ ಆರಂಭ ಆಗಲು ಕಾರಣ ಏನು ಎಂಬುದನ್ನು ರಶ್ಮಿ ಅವರು ಎಳೆಎಳೆಯಾಗಿ ವಿವರಿಸಿದ್ದಾರೆ. ಫ್ಲ್ಯಾಟ್ ವಿಚಾರಕ್ಕೆ ಜಗಳ ನಡೆದಿದೆ. ರಂಜಿತ್ ಅಕ್ಕ ರಶ್ಮಿ ಮಾತನಾಡಿದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More