ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್

Updated on: Oct 09, 2026 | 10:07 AM

ಬಿಗ್ ಬಾಸ್ ಮನೆಯಲ್ಲಿ ಎಲ್ಲರೂ ಉತ್ತಮ ಆಡುತ್ತಿದ್ದಾರೆ. ಗಾನವಿ ಕೂಡ ಇದಕ್ಕೆ ಹೊರತಾಗಿಲ್ಲ. ಅವರು ಈಗ ಸೈಲೆಂಟ್ ಆಗಿ ಕೌಂಟರ್ ಕೊಟ್ಟಿದ್ದಾರೆ. ಈ ವಿಷಯ ಸಾಕಷ್ಟು ಚರ್ಚೆಗೆ ಕಾರಣ ಆಗಿದೆ. ತಾಂಡವ್ ರಾಮ್ ನಡೆಯು ಸಾಕಷ್ಟು ಪ್ರಶ್ನೆಗಳನ್ನು ಮೂಡಿಸಿದೆ. ಇದಕ್ಕೆ ಅವರು ಯಾವ ರೀತಿ ಉತ್ತರಿಸುತ್ತಾರೆ ಎಂಬುದನ್ನು ನೋಡಬೇಕಿದೆ.

ಬಿಗ್ ಬಾಸ್ ಮನೆಯಲ್ಲಿ ಗಾನವಿ ಕೊಟ್ಟ ಕೌಂಟರ್​ಗೆ ತಾಂಡವ್ ರಾಮ್ ಸೈಲೆಂಟ್ ಆಗಿದ್ದಾರೆ. ‘ಕ್ಯಾಪ್ಟನ್ಸಿ ಓಟಕ್ಕೆ ಗಾನವಿ ಅರ್ಹಲ್ಲ’ ಎಂದರು ತಾಂಡವ್. ಆಗ ಗಾನವಿ, ‘ನೀವು ಯಾವಾಗಲೂ ಗಗನ್ ಪಕ್ಕ ಇರೋ ತಾಂಡವ್ ಎಂದೆ ಗುರುತಿಸಿಕೊಳ್ಳುತ್ತೀರಿ. ನೀವು ಏನೂ ಆಡುತ್ತಿಲ್ಲ ಎಂದು ಹೊರಕ್ಕೆ ಕಳುಹಿಸಿ ಮತ್ತೆ ಕರೆತರಲಾಯಿತು. ಆದರೂ, ನೀವು ಬದಲಾಗಿಲ್ಲ’ ಎಂದು ಗಾನವಿ ಅವರು ತಾಂಡವ್ ರಾಮ್​ಗೆ ಹೇಳಿದರು. ಇದನ್ನು ಕೇಳಿ ತಾಂಡವ್ ಸೈಲೆಂಟ್ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More