ಈ ಬಾರಿ ಬಿಗ್​ಬಾಸ್​ ಗೆಲ್ಲೋದು ಯಾರು? ಉತ್ತರ ಕೊಟ್ಟ ಗೋಲ್ಡ್ ಸುರೇಶ್

Updated on: Dec 19, 2024 | 7:16 PM

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 11 ರಿಂದ ಗೋಲ್ಡ್ ಸುರೇಶ್ ಹೊರಗೆ ಬಂದಿದ್ದಾರೆ. ಅವರು ಎಲಿಮಿನೇಟ್ ಆಗಿ ಬಂದಿಲ್ಲ ಬದಲಿಗೆ ವೈಯಕ್ತಿಕ ಕಾರಣಕ್ಕೆ ಹೊರಗೆ ಬಂದಿದ್ದಾರೆ. ಹೊರಗೆ ಬಂದ ಬಳಿಕ ಮಾಧ್ಯಮಗಳ ಬಳಿ ಮಾತನಾಡಿ, ಈ ಸೀಸನ್ ಗೆಲ್ಲುವವರು ಯಾರೆಂದು ಹೇಳಿದ್ದಾರೆ.

ಗೋಲ್ಡ್ ಸುರೇಶ್ ಬಿಗ್​ಬಾಸ್ ಮನೆಯಿಂದ ಹೊರಗೆ ಬಂದಿದ್ದಾರೆ. ಎಲಿಮಿನೇಷನ್ ಇಲ್ಲದೆ, ವೈಯಕ್ತಿಕ ಕಾರಣಗಳಿಂದಾಗಿ ಸುರೇಶ್ ಬಿಗ್​ಬಾಸ್ ತೊರೆದು ಬಂದಿದ್ದಾರೆ. ತಾವು ಬಿಗ್​ಬಾಸ್ ಬಿಟ್ಟು ಹೊರಗೆ ಬಂದಿದ್ದು ಏಕೆ ಎಂಬುದನ್ನು ಸಹ ವಿವರಿಸಿದ್ದಾರೆ. ಉದ್ಯಮದ ಕಾರಣದಿಂದಾಗಿ ಸುರೇಶ್ ಅವರು ಬಿಗ್​ಬಾಸ್ ತೊರೆದು ಬಂದರಂತೆ. 50 ದಿನಕ್ಕೂ ಹೆಚ್ಚು ಸಮಯದಿಂದ ಬಿಗ್​ಬಾಸ್​ ಮನೆಯಲ್ಲಿದ್ದ ಸುರೇಶ್ ಒಳಗಿರುವವರ ಆಟವನ್ನು ಹತ್ತಿರದಿಂದ ನೋಡಿದ್ದಾರೆ. ಇದೀಗ ಹೊರಗೆ ಬಂದ ಬಳಿಕ ಟಿವಿ9ಗೆ ನೀಡಿರುವ ಸಂದರ್ಶನದಲ್ಲಿ ಈ ಬಾರಿ ಬಿಗ್​ಬಾಸ್ ಯಾರು ಗೆಲ್ಲುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More