ಹದಗೆಡುತ್ತಲೇ ಇದೆ ಮನೆಯ ವಾತಾವರಣ; ಸಿಟ್ಟಲ್ಲಿ ಕೂಗಾಡಿದ ಬಿಗ್ ಬಾಸ್

Updated on: Oct 16, 2024 | 8:19 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಜಗದೀಶ್ ಅವರ ವರ್ತನೆ ಮಿತಿ ಮೀರುತ್ತಿದೆ. ಅವರು ಬೇಕಂತಲೇ ಎಲ್ಲರನ್ನೂ ಕೆರಳಿಸುತ್ತಿದ್ದಾರೆ. ಇದು ಅನೇಕರ ಕೋಪಕ್ಕೆ ಕಾರಣ ಆಗಿದೆ. ಈ ಮಧ್ಯೆ ಅವರು ಬಿಗ್ ಬಾಸ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ. ಯಾರೊಬ್ಬರೂ ಇದನ್ನು ಸಹಿಸಿಲ್ಲ. ಇಡೀ ಮನೆ ಜಗದೀಶ್ ವಿರುದ್ಧ ಒಂದಾಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಕಿತ್ತಾಟ ಜೋರಾಗಿದೆ. ಇದರಿಂದ ಇಡೀ ಮನೆಯ ವಾತಾವರಣ ಹದಗೆಡುತ್ತಿದೆ. ಪ್ರತಿ ವಿಚಾರಕ್ಕೆ ಜಗದೀಶ್ ಅವರು ಮೂಗು ತೂರಿಸುತ್ತಿದ್ದಾರೆ. ಇದು ಮನೆಯವರಿಗೆ ಇಷ್ಟ ಆಗುತ್ತಿಲ್ಲ. ಜಗದೀಶ್ ಹಾಗೂ ಮಂಜು ಏಕವಚನದಲ್ಲಿ ಕೂಗಾಡಿಕೊಂಡಿದ್ದಾರೆ. ಬಿಗ್ ಬಾಸ್​​ನ ಆದೇಶಕ್ಕೂ ಯಾರೂ ಕಿಮ್ಮತ್ತು ಕೊಟ್ಟಿಲ್ಲ. ಆ ಬಳಿಕ ಬಿಗ್ ಬಾಸ್ ‘ಸದ್ದು’ ಎಂದು ಕೂಗಿದ್ದಾರೆ. ಆ ಬಳಿಕ ಎಲ್ಲರೂ ಶಾಂತರಾದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More