AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಒಂದು ತಿಂಗಳು ಹೊರಗಿದ್ದ ಬಚ್ಚಾ ನೀನು’; ಮಂಜುಗೆ ಪ್ರಶಾಂತ್ ಅವಾಜ್

‘ಒಂದು ತಿಂಗಳು ಹೊರಗಿದ್ದ ಬಚ್ಚಾ ನೀನು’; ಮಂಜುಗೆ ಪ್ರಶಾಂತ್ ಅವಾಜ್

ರಾಜೇಶ್ ದುಗ್ಗುಮನೆ
|

Updated on: Nov 11, 2026 | 12:03 PM

Share

ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್ ಒಂದರ ವೇಳೆ ಮಂಜು ಹಾಗೂ ಪ್ರಶಾಂತ್ ನಡುವೆ ತೀವ್ರ ಸ್ವರೂಪದ ಮಾತಿನ ಚಕಮಕಿ ನಡೆದಿದೆ. ಇಬ್ಬರೂ ಪರಸ್ಪರ ಮುಖಾಮುಖಿಯಾಗಿ ಉಗ್ರವಾಗಿ ವಾದಿಸಿಕೊಂಡಿದ್ದು, ಮನೆಯಲ್ಲಿ ವಾತಾವರಣ ಉದ್ವಿಗ್ನಗೊಂಡಿತ್ತು. ಈ ಜಗಳ ಮುಂಬರುವ ದಿನಗಳಲ್ಲಿ ಆಟದ ಮೇಲೆ ಬೀರುವ ಪ್ರಭಾವದ ಕುರಿತು ವೀಕ್ಷಕರಲ್ಲಿ ಕುತೂಹಲ ಮೂಡಿದೆ.

ಬಿಗ್ ಬಾಸ್ ಮನೆಯಲ್ಲಿ ಮಂಜು ಬಂದ ಬಳಿಕ ಆಟದ ಸ್ವರೂಪ ಬದಲಾಗಿದೆ. ಸ್ಪರ್ಧಿಗಳ ನಡುವಿನ ಮಾತಿನ ಚಕಮಕಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಟಾಸ್ಕ್ ಒಂದರ ವೇಳೆ ಮಂಜು ಹಾಗೂ ಪ್ರಶಾಂತ್ ಮಧ್ಯೆ ತೀವ್ರ ವಾಗ್ವಾದ ಹಾಗೂ ಕಿರಿಕ್ ಉಂಟಾಗಿದೆ.

ಆಟದ ತೀವ್ರತೆಯಲ್ಲಿ ಇಬ್ಬರೂ ಪರಸ್ಪರ ಹತ್ತಿರ ಬಂದು ಕಠಿಣ ಶಬ್ದಗಳಿಂದ ನಿಂದಿಸಿಕೊಳ್ಳುತ್ತಾ ಮಾತಿಗೆ ಮಾತು ಬೆಳೆಸಿದ್ದಾರೆ. ಆಟದ ವಿಷಯವಾಗಿ ಮಂಜು ಆಕ್ರೋಶ ಹೊರಹಾಕಿದರು. ಇದಕ್ಕೆ ಉತ್ತರಿಸಿದ ಪ್ರಶಾಂತ್, ‘ಒಂದು ತಿಂಗಳು ಹೊರಗಿದ್ದ ಬಚ್ಚಾ ನೀನು’ ಎಂದರು. ಇದರಿಂದ ಮಂಜು ಕೂಡ ಸಿಟ್ಟಾದರು. ಮಂಜು ಮತ್ತು ಪ್ರಶಾಂತ್ ನಡುವೆ ಭುಗಿಲೆದ್ದ ಈ ಜಗಳ ಮುಂಬರುವ ದಿನಗಳಲ್ಲಿ ಬಿಗ್ ಬಾಸ್ ಮನೆಯ ಆಟವನ್ನು ಹೇಗೆ ಬದಲಾಯಿಸಲಿದೆ ಹಾಗೂ ಈ ಗಲಾಟೆಗೆ ವಾರಾಂತ್ಯದ ಪಂಚಾಯಿತಿಯಲ್ಲಿ ಕಿಚ್ಚ ಸುದೀಪ್ ಯಾವ ರೀತಿ ಪ್ರತಿಕ್ರಿಯಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More