ಕಾವ್ಯಾ ಗೆಳೆತನದಿಂದ ಗಿಲ್ಲಿ ಆಟಕ್ಕೆ ಹಿನ್ನೆಡೆ? ಸಿಕ್ಕಿತು ಎಚ್ಚರಿಕೆ

Updated on: Oct 21, 2025 | 10:33 AM

ಅಶ್ವಿನಿ ಅಥವಾ ಆ್ಯಶ್ ಅವರು ಬಿಗ್ ಬಾಸ್ ಮನೆಗೆ ಸ್ಪರ್ಧಿ ಆಗಿ ಕಾಲಿಟ್ಟಿದ್ದಾರೆ. ಅವರು ಈಗ ಕಾವ್ಯಾ ಹಾಗೂ ಗಿಲ್ಲಿ ಬಗ್ಗೆ ಟಿವಿ9 ಕನ್ನಡದ ಜೊತೆ ಮಾತನಾಡಿದ್ದಾರೆ. ಈ ವಿಡಿಯೋದಲ್ಲಿ ಅವರು ಸ್ಪಷ್ಟವಾಗಿ ಒಂದು ಎಚ್ಚರಿಕೆ ನೀಡಿದ್ದಾರೆ. ಅಷ್ಟಕ್ಕೂ ಏನು ಆ ಎಚ್ಚರಿಕೆ? ಇಲ್ಲಿದೆ ವಿವರ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಕಾವ್ಯಾ ಗೌಡ ಅವರು ಸಾಕಷ್ಟು ಜನಪ್ರಿಯತೆ ಪಡೆದರು. ಇದಕ್ಕೆ ಕಾರಣ ಗಿಲ್ಲಿ ಎಂಬ ಮಾತೂ ಇದೆ. ಇಬ್ಬರೂ ಜಂಟಿ ಆಗಿದ್ದರಿಂದ ಪರಸ್ಪರ ಗಮನ ಸೆಳೆದರು. ಆದರೆ, ಕಾವ್ಯಾ ಗೌಡ ಹಾಗೂ ಗಿಲ್ಲಿ ಜೊತೆಗೆ ಇದ್ದರೆ ಗಿಲ್ಲಿ ಆಟದ ಮೇಲೆ ಪರಿಣಾಮ ಉಂಟಾಗಬಹುದು ಎಂದು ಬಿಗ್ ಬಾಸ್ ಮನೆಯಿಂದ ಹೊರ ಬಂದ ಅಶ್ವಿನಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More