Bigg Boss Kannada Press Meet Live: ‘ಬಿಗ್ ಬಾಸ್ ಕನ್ನಡ ಸೀಸನ್ 11’ ಕುರಿತು ಕಿಚ್ಚ ಸುದೀಪ್ ಸುದ್ದಿಗೋಷ್ಠಿ; ಲೈವ್ ನೋಡಿ..
Kichcha Sudeep Press Meet Live Streaming: ಸೆಪ್ಟೆಂಬರ್ 29ರಂದು ‘ಬಿಗ್ ಬಾಸ್ ಕನ್ನಡ ಸೀಸನ್ 11’ ಆರಂಭ ಆಗಲಿದೆ. ಆ ಬಗ್ಗೆ ಮಾಹಿತಿ ನೀಡಲು ಇಂದು (ಸೆ.23) ಕಿಚ್ಚ ಸುದೀಪ್ ಅವರ ಕಲರ್ಸ್ ಕನ್ನಡ ವಾಹಿನಿ ಜೊತೆ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಸುದ್ದಿಗೋಷ್ಟಿಯ ಲೈವ್ ವಿಡಿಯೋ ಇಲ್ಲಿದೆ. ಈ ಬಾರಿಯ ವಿಶೇಷತೆಗಳು ಏನು ಎಂಬ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗುತ್ತಿದೆ.
ಸತತ 11ನೇ ಸಾಲಿಗೆ ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕನಾಗಿ ಮುಂದುವರಿಯುತ್ತಿದ್ದಾರೆ. ‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಸೆ.29ಕ್ಕೆ ‘ಬಿಗ್ ಬಾಸ್ ಕನ್ನಡ’ 11ನೇ ಸೀಸನ್ ಶುರುವಾಗಲಿದೆ. ಪ್ರತಿ ಬಾರಿಯೂ ಹೊಸ ಹೊಸ ಅಂಶಗಳನ್ನು ಪರಿಚಯಿಸಲಾಗುತ್ತದೆ. ಈ ವರ್ಷದ ವಿಶೇಷತೆಗಳ ಬಗ್ಗೆ ಕಿಚ್ಚ ಸುದೀಪ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡುತ್ತಿದ್ದಾರೆ. ಕಿರುತೆರೆ, ಮಾಧ್ಯಮ, ಸಿನಿಮಾ ಮುಂತಾದ ಕ್ಷೇತ್ರಗಳ ಸ್ಪರ್ಧಿಗಳು ‘ಬಿಗ್ ಬಾಸ್ ಕನ್ನಡ ಸೀಸನ್ 11’ ಶೋನಲ್ಲಿ ಭಾಗಿಯಾಗಲಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 4:06 pm, Mon, 23 September 24