ಕಿಚ್ಚನ ಟಾರ್ಗೆಟ್ ಆದ ಉಗ್ರಂ ಮಂಜು, ಮೋಕ್ಷಿತಾ, ಗೌತಮಿ

Updated on: Nov 30, 2024 | 6:28 PM

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 11 ರ ಶನಿವಾರದ ಎಪಿಸೋಡ್​ನಲ್ಲಿ ಕಿಚ್ಚ ಸುದೀಪ್, ಈ ವಾರದ ಸ್ಪರ್ಧಿಗಳ ಪ್ರದರ್ಶನವನ್ನು ವಿಮರ್ಶೆ ಮಾಡಿದ್ದಾರೆ. ಉಗ್ರಂ ಮಂಜು, ಮೋಕ್ಷಿತಾ ಹಾಗೂ ಗೌತಮಿಯ ಆಟವನ್ನು ಪ್ರಶ್ನೆ ಮಾಡಿದ್ದಾರೆ.

ಬಿಗ್​ಬಾಸ್​ನಲ್ಲಿ ಮತ್ತೊಂದು ವೀಕೆಂಡ್ ಬಂದಿದೆ. ಮತ್ತೆ ಕಿಚ್ಚ ವೇದಿಕೆಗೆ ಬಂದಿದ್ದಾರೆ. ಈ ವಾರವೆಲ್ಲ ಮನೆಯಲ್ಲಿ ಮಹಾರಾಜ ಮತ್ತು ಮಹಾರಾಣಿಯರ ಆರ್ಭಟ ಜೋರಾಗಿತ್ತು. ಪ್ರಜಾ ಪಾಲನೆ ಮಾಡಲಿ ಎಂಬ ಉದ್ಧೇಶದಿಂದ ಉಗ್ರಂ ಮಂಜು ಅವರನ್ನು ಮಹಾರಾಜರನ್ನಾಗಿಯೂ ಮೋಕ್ಷಿತಾ ಅನ್ನು ಮಹಾರಾಣಿಯನ್ನಾಗಿಯೂ ಮಾಡಲಾಗಿತ್ತು. ಆದರೆ ಮನೆಯಲ್ಲಿ ಆಗಿದ್ದೇ ಬೇರೆ. ಮಹರಾಜ ಮತ್ತು ಮಹಾರಾಣಿಯರೇ ಪರಸ್ಪರ ಕಿತ್ತಾಡಿಕೊಂಡರು. ಗೌತಮಿ ಸೇರಿದಂತೆ ಕೆಲವು ಸದಸ್ಯರು ಬಿಗ್​ಬಾಸ್ ಆದೇಶವನ್ನು ಪಾಲಿಸಿಲ್ಲ. ಇದು ಕಿಚ್ಚನ ಕೋಪಕ್ಕೆ ಕಾರಣವಾಗಿದ್ದು, ಇವುಗಳನ್ನು ಪ್ರಶ್ನೆ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More