ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು; ಹೆಚ್ಚಿತು ಸ್ಪರ್ಧೆ

Updated on: Dec 11, 2023 | 2:53 PM

ತುಕಾಲಿ ಸಂತೋಷ್ ಹಾಗೂ ಡ್ರೋನ್ ಪ್ರತಾಪ್ ಒಂದೇ ಗ್ಯಾಂಗ್​ನಲ್ಲಿದ್ದವರು. ಆದಾಗ್ಯೂ ತುಕಾಲಿ ಅವರು ಡ್ರೋನ್​ ಪ್ರತಾಪ್​ನ ನಾಮಿನೇಟ್ ಮಾಡಿದ್ದಾರೆ. ವರ್ತೂರು ಸಂತೋಷ್ ಹಾಗೂ ತನಿಷಾ ಕ್ಲೋಸ್ ಆಗಿದ್ದರು. ಆದರೆ, ತನಿಷಾ ಅವರನ್ನು ವರ್ತೂರು ಸಂತೋಷ್ ನಾಮಿನೇಟ್ ಮಾಡಿದ್ದಾರೆ.

ಬಿಗ್ ಬಾಸ್​ ಮನೆಯಲ್ಲಿ ಯಾರು ಯಾವಾಗ ಗೆಳೆಯರಾಗುತ್ತಾರೆ, ಯಾವಾಗ ಬದ್ಧ ವೈರಿಗಳಾಗುತ್ತಾರೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ಹತ್ತನೇ ವಾರಕ್ಕೆ ಬಿಗ್ ಬಾಸ್ ಆಟದ ರಂಗು ಹೆಚ್ಚಿದೆ. ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ಜೋರಾಗಿದೆ. ಆಪ್ತರನ್ನೇ ನಾಮಿನೇಟ್ ಮಾಡುವ ಪರಿಸ್ಥಿತಿ ಬಂದೊದಗಿದೆ. ತುಕಾಲಿ ಸಂತೋಷ್ (Tukali Santosh) ಹಾಗೂ ಡ್ರೋನ್ ಪ್ರತಾಪ್ ಒಂದೇ ಗ್ಯಾಂಗ್​ನಲ್ಲಿದ್ದವರು. ಆದಾಗ್ಯೂ ತುಕಾಲಿ ಅವರು ಡ್ರೋನ್​ ಪ್ರತಾಪ್​ನ ನಾಮಿನೇಟ್ ಮಾಡಿದ್ದಾರೆ. ವರ್ತೂರು ಸಂತೋಷ್ ಹಾಗೂ ತನಿಷಾ ಕ್ಲೋಸ್ ಆಗಿದ್ದರು. ಆದರೆ, ತನಿಷಾ ಅವರನ್ನು ವರ್ತೂರು ಸಂತೋಷ್ ನಾಮಿನೇಟ್ ಮಾಡಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಪೂರ್ತಿ ಎಪಿಸೋಡ್ ಪ್ರಸಾರ ಕಾಣಲಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More