ಬಿಗ್ ಬಾಸ್ ಮನೆಯಲ್ಲಿ ಕಳ್ಳರ ಕೈಚಳಕ; ಸೆಕ್ಯುರಿಟಿ ಕಣ್ಣು ತಪ್ಪಿಸಿ ಕಳ್ಳತನ

Updated on: Oct 22, 2026 | 8:35 AM

ಬಿಗ್ ಬಾಸ್ ಮನೆಯಲ್ಲಿ ಭದ್ರತೆ ಒದಗಿಸಬೇಕಾದ ರಕ್ಷಕರು ಪರಸ್ಪರ ಜಗಳವಾಡಿಕೊಳ್ಳುತ್ತಿರುವ ದೃಶ್ಯಗಳು ಪ್ರೋಮೋದಲ್ಲಿ ಕಾಣಿಸಿಕೊಂಡಿವೆ. ಕಾವಲುಗಾರರ ನಡುವಿನ ಈ ಬಾಗವಾದ ಮತ್ತು ಮಾತಿನ ಚಕಮಕಿಯಿಂದಾಗಿ ಮನೆಯಲ್ಲಿ ದೊಡ್ಡ ಮಟ್ಟದ ಕಳ್ಳತನ ಹಾಗೂ ಲೂಟಿಗೆ ದಾರಿ ಮಾಡಿಕೊಟ್ಟಂತಾಗಿದೆ. ರಕ್ಷಕರ ಈ ಬೇಜವಾಬ್ದಾರಿಯಿಂದ ಆಟದ ದಿಕ್ಕು ಬದಲಾಗಲಿದೆ.

ಬಿಗ್ ಬಾಸ್ ಕನ್ನಡ ಮನೆಯಲ್ಲಿ ಆಟದ ರೋಚಕತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸ್ಪರ್ಧಿಗಳ ನಡುವಿನ ಜಟಾಪಟಿ ತೀವ್ರಗೊಂಡಿದೆ. ಕಾವಲು ಕಾಯಬೇಕಾದ ರಕ್ಷಕರೇ ಪರಸ್ಪರ ಜಗಳವಾಡಿಕೊಳ್ಳುತ್ತಿರುವುದು ಕಂಡುಬಂದಿದೆ. ಗಾರ್ಡ್‌ಗಳಾದ ಕಿರಣ್ ಹಾಗೂ ಗಾನವಿ ನಡುವೆ ಕಿತ್ತಾಟ ನಡೆದಿದೆ. ಇದರ ಲಾಭ ಲೂಟಿ ಮಾಡುವವರಿಗೆ ಸುಲಭವಾಗಿದೆ ಎಂಬುದು ಸ್ಪಷ್ಟವಾಗುತ್ತದೆ. ರಕ್ಷಕರ ಈ ನಿರ್ಲಕ್ಷ್ಯ ಹಾಗೂ ಜಗಳದಿಂದ ಮನೆಯಲ್ಲಿ ಮುಂದೇನು ಅನಾಹುತ ನಡೆಯಲಿದೆ ಎಂಬ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More