‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಸುದ್ದಿಗೋಷ್ಠಿ: ಹೊಸ ಸೀಸನ್​ ಬಗ್ಗೆ ಕಿಚ್ಚ ಸುದೀಪ್​ ಹೇಳೋದೇನು?

Updated on: Oct 03, 2023 | 12:30 PM

Bigg Boss Kannada Season 10 Press Meet: ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ರಿಯಾಲಿಟಿ ಶೋ ಅಕ್ಟೋಬರ್​ 8ರಂದು ಕಲರ್ಸ್​ ಕನ್ನಡದಲ್ಲಿ ಲಾಂಚ್​ ಆಗಲಿದೆ. ಈ ಸೀಸನ್​ನ ವಿಶೇಷತೆಗಳ ಬಗ್ಗೆ ಮಾಹಿತಿ ನೀಡಲು ಇಂದು (ಅ.3) ಸುದ್ದಿಗೋಷ್ಠಿ ಆಯೋಜಿಸಲಾಗಿದೆ. ಇದರಲ್ಲಿ ಕಿಚ್ಚ ಸುದೀಪ್​ ಭಾಗಿ ಆಗಿದ್ದಾರೆ. ಸುದ್ದಿಗೋಷ್ಠಿಯ ಲೈವ್​ ವಿಡಿಯೋ ಇಲ್ಲಿದೆ..

ಕನ್ನಡ ಬಿಗ್​ ಬಾಸ್​ ರಿಯಾಲಿಟಿ ಶೋ ಈವರೆಗೆ 9 ಸೀಸನ್​ಗಳನ್ನು ಯಶಸ್ವಿಯಾಗಿ ಪೂರೈಸಿದೆ. ಈಗ 10ನೇ ಸೀಸನ್​ (Bigg Boss Kannada Season 10) ಆರಂಭಕ್ಕೆ ದಿನಗಣನೆ ಶುರುವಾಗಿದೆ. ಎಂದಿನಂತೆ ಕಿಚ್ಚ ಸುದೀಪ್​ ಅವರು ನಿರೂಪಣೆಯ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಆರಂಭಕ್ಕೂ ಮುನ್ನ ಕಲರ್ಸ್​ ಕನ್ನಡ ವಾಹಿನಿ ಮತ್ತು ಕಿಚ್ಚ ಸುದೀಪ್​ (Kichcha Sudeep) ಅವರು ಸುದ್ದಿಗೋಷ್ಠಿ ಆಯೋಜಿಸಿದ್ದಾರೆ. ಈ ಸೀಸನ್​ನ ವಿಶೇಷತೆಗಳ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಲಾಗುತ್ತಿದೆ. ಅಕ್ಟೋಬರ್​ 8ರಂದು ಈ ರಿಯಾಲಿಟಿ ಶೋ ಲಾಂಚ್​ ಆಗಲಿದೆ. ಪ್ರತಿದಿನ 9.30ಕ್ಕೆ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಸಂಚಿಕೆಗಳು ಪ್ರಸಾರ ಆಗಲಿವೆ. ಈ ಬಾರಿ ಯಾವೆಲ್ಲ ಸ್ಪರ್ಧಿಗಳು (Bigg Boss Kannada Season 10 Contestants) ಬರಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಸುದೀಪ್​ ಅವರು ಸದ್ಯ ‘ಮ್ಯಾಕ್ಸ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ನಡುವೆಯೂ ಅವರು ಬಿಗ್​ ಬಾಸ್​ ನಿರೂಪಣೆಗೆ ಸಮಯ ಹೊಂದಿಸಿಕೊಳ್ಳಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More