‘ನನ್ನನ್ನು ದರಿದ್ರ ಎಂದರು’; ಬಿಗ್ ಬಾಸ್ ಮನೆಯಲ್ಲಿ ಕಣ್ಣೀರು ಹಾಕಿದ ನಮ್ರತಾ ಗೌಡ

Updated on: Oct 25, 2023 | 11:36 AM

ನಮ್ರತಾ ಗೌಡಗೆ ಕುಟುಂಬದವರಿಂದಲೇ ಹಿನ್ನಡೆ ಆಯಿತು. ಹೆಣ್ಣು ಮಗು ಎಂಬ ಕಾರಣಕ್ಕೆ ಅವರನ್ನು ಹೊರಗಿಟ್ಟರು. ಕಾರ್ತಿಕ್​ಗೆ ತಂದೆಯನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಇನ್ನು, ಡ್ರೋನ್ ಪ್ರತಾಪ್ ಅವರಿಂದ ಕುಟುಂಬದವರು ತೊಂದರೆಗೆ ಸಿಲುಕಿದರು.

ಪ್ರತಿ ಬಾರಿ ಬಿಗ್ ಬಾಸ್ ರಿಯಾಲಿಟಿ ಶೋ ಆರಂಭ ಆದಾಗ ಸ್ಪರ್ಧಿಗಳಿಗೆ ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆ ಬಗ್ಗೆ ಹೇಳಿಕೊಳ್ಳಲು ಒಂದು ಅವಕಾಶ ನೀಡಲಾಗುತ್ತದೆ. ಈ ಮೂಲಕ ಮನಸ್ಸು ಹಗುರ ಮಾಡಿಕೊಳ್ಳಬಹುದು. ನಮ್ರತಾ ಗೌಡಗೆ (Namratha Gowda) ಕುಟುಂಬದವರಿಂದಲೇ ಹಿನ್ನಡೆ ಆಯಿತು. ಹೆಣ್ಣು ಮಗು ಎಂಬ ಕಾರಣಕ್ಕೆ ಅವರನ್ನು ಹೊರಗಿಟ್ಟರು. ಕಾರ್ತಿಕ್​ಗೆ ತಂದೆಯನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಇನ್ನು, ಡ್ರೋನ್ ಪ್ರತಾಪ್ ಅವರಿಂದ ಕುಟುಂಬದವರು ತೊಂದರೆಗೆ ಸಿಲುಕಿದರು. ಈ ಎಲ್ಲಾ ವಿಚಾರಗಳ ಬಗ್ಗೆ ಹೇಳಿಕೊಂಡು ಬಿಗ್ ಬಾಸ್ ಮಂದಿ ಕಣ್ಣೀರು ಹಾಕಿದ್ದಾರೆ. ಆ ವಿಡಿಯೋ ಇಲ್ಲಿದೆ. ಕಲರ್ಸ್ ಕನ್ನಡದಲ್ಲಿ ಪ್ರತಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More