ಬೆಳಗ್ಗೆ ಕಣ್ಣು ಬಿಡೋದಕ್ಕೂ ಮುನ್ನವೇ ಬಿಗ್ ಬಾಸ್ ಮನೆಯಲ್ಲಿ ಜಗಳ; 2ನೇ ವಾರದ ಆಟ ಅಷ್ಟು ಸುಲಭವಿಲ್ಲ
ಸೋಮವಾರ (ಅ.16) ಬೆಳಗ್ಗೆ ಸ್ಪರ್ಧಿಗಳು ಕಣ್ಣು ಬಿಡುವುದಕ್ಕೂ ಮುನ್ನವೇ ಬಿಗ್ ಬಾಸ್ ಒಂದು ಆದೇಶ ನೀಡಿದ್ದಾರೆ. ಇದರಿಂದಾಗಿ ದೊಡ್ಮನೆಯ ಸದಸ್ಯರ ನಡುವೆ ಕಿತ್ತಾಟ ಶುರುವಾಗಿದೆ. ಒಬ್ಬರು ಇನ್ನೊಬ್ಬರ ಕಡೆಗೆ ಕೈ ತೋರಿಸಿ ಜಗಳ ಮಾಡಿದ್ದಾರೆ. ಒಟ್ಟಿನಲ್ಲಿ ಎರಡನೇ ವಾರದ ಆರಂಭದಲ್ಲೇ ಮನಸ್ತಾಪಕ್ಕೆ ದಾರಿ ಮಾಡಿಕೊಟ್ಟಂತೆ ಆಗಿದೆ.
ಮೊದಲ ವಾರವೇ ಸ್ನೇಕ್ ಶ್ಯಾಮ್ ಅವರು ಎಲಿಮಿನೇಟ್ (Bigg Boss Elimination) ಆದ ಬಳಿಕ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಆಟ ಚುರುಕಾಗಿದೆ. ಎರಡನೇ ವಾರದಲ್ಲಿ ಸ್ಪರ್ಧಿಗಳ ನಡುವಿನ ಪೈಪೋಟಿ ಹೆಚ್ಚಾಗಿದೆ. ಮೊದಲೆಲ್ಲ ಕನ್ಫೆಷನ್ ರೂಮ್ನಲ್ಲಿ ಯಾರಿಗೂ ತಿಳಿಯದಂತೆ ನಾಮಿನೇಟ್ ಮಾಡುವ ಅವಕಾಶ ಇರುತ್ತಿತ್ತು. ಆದರೆ ಈ ಸೀಸನ್ ಆರಂಭದಲ್ಲಿ ನೇರಾನೇರವಾಗಿ ನಾಮಿನೇಟ್ ಮಾಡಲು ಬಿಗ್ ಬಾಸ್ ಸೂಚಿಸಿದ್ದಾರೆ. ಸೋಮವಾರ (ಅಕ್ಟೋಬರ್ 16) ಬೆಳಗ್ಗೆ ಸ್ಪರ್ಧಿಗಳು ಕಣ್ಣು ಬಿಡುವುದಕ್ಕೂ ಮುನ್ನವೇ ನಾಮಿನೇಟ್ (Bigg Boss Nomination) ಆದೇಶ ಬಂದಿದೆ. ಅನಿವಾರ್ಯವಾಗಿ ಎಲ್ಲರೂ ಒಬ್ಬೊಬ್ಬರ ಹೆಸರು ಸೂಚಿಸಲೇಬೇಕಾದ ಸಂದರ್ಭ ಎದುರಾಗಿದೆ. ಇದರಿಂದಾಗಿ ದೊಡ್ಮನೆಯ ಸದಸ್ಯರ ನಡುವೆ ಕಿತ್ತಾಟ ಶುರುವಾಗಿದೆ. ಒಬ್ಬರು ಇನ್ನೊಬ್ಬರ ಕಡೆಗೆ ಕೈ ತೋರಿಸಿ ಜಗಳ ಮಾಡಿದ್ದಾರೆ. ಒಟ್ಟಿನಲ್ಲಿ ಎರಡನೇ ವಾರದ ಆರಂಭದಲ್ಲೇ ಮನಸ್ತಾಪಕ್ಕೆ ದಾರಿಮಾಡಿಕೊಟ್ಟಂತೆ ಆಗಿದೆ. ‘ಬಿಗ್ ಬಾಸ್’ (Bigg Boss Kannada Season 10) ಕಾರ್ಯಕ್ರಮ ‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಪ್ರತಿ ದಿನ ರಾತ್ರಿ 9.30ಕ್ಕೆ ಪ್ರಸಾರ ಆಗುತ್ತಿದೆ. ‘ಜಿಯೋ ಸಿನಿಮಾ’ ಮೂಲಕ ದಿನದ 24 ಗಂಟೆಯೂ ಈ ಕಾರ್ಯಕ್ರಮವನ್ನು ಉಚಿತವಾಗಿ ನೋಡಲು ಅವಕಾಶ ಇದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

